Joshua 14:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಯೆಹೋವನು ತಾನು ಹೇಳಿದಂತೆ ನನ್ನನ್ನು ನಲವತ್ತೈದು ವರ್ಷ ಜೀವಂತವಾಗಿ ಉಳಿಸಿದ್ದಾನೆ. ಆ ಸಮಯದಲ್ಲಿ ನಾವೆಲ್ಲರು ಅರಣ್ಯದಲ್ಲಿ ಸುತ್ತಾಡಿದೆವು. ಈಗ ನಾನು ಎಂಭತ್ತೈದು ವರ್ಷದವನಾಗಿದ್ದೇನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ಈ ಮಾತುಗಳನ್ನು ಮೋಶೆಗೆ ಹೇಳಿದಂದಿನಿಂದ ಇಸ್ರಾಯೇಲ್ಯರು ಅರಣ್ಯದಲ್ಲಿ ಅಲೆಯುತ್ತಿದ್ದ ವರ್ಷಗಳು ಸೇರಿ ನಲ್ವತ್ತೈದು ವರ್ಷಗಳು ದಾಟಿದವು. ಯೆಹೋವನು ತಾನು ನುಡಿದಂತೆಯೇ ಈ ಕಾಲವೆಲ್ಲಾ ನನ್ನನ್ನು ಜೀವದಿಂದುಳಿಸಿದ್ದಾನೆ. ಈಗ ನಾನು ಎಂಭತ್ತೈದು ವರ್ಷದವನಾಗಿದ್ದೇನೆ.
Kannada BSI Bible 2016
ಈಗ ಇಗೋ, ಕರ್ತನು ಮೋಶೆಗೆ ಈ ವಾಕ್ಯವನ್ನು ಹೇಳಿದಂದಿನಿಂದ ಇಸ್ರಾಯೇಲ್‌ ಮಕ್ಕಳು ಅರಣ್ಯದಲ್ಲಿ ಸಂಚರಿಸಿದ ನಾಲ್ವತ್ತೈದು ವರುಷ ಕರ್ತನು ಹೇಳಿದ ಹಾಗೆಯೇ ನನ್ನನ್ನು ಜೀವದಿಂದ ಇಟ್ಟಿದ್ದಾನೆ. ಈಗ ಇಗೋ, ನಾನು ಇಂದು ಎಂಭತ್ತೈದು ವರುಷ ಪ್ರಾಯದವನಾಗಿದ್ದೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಈ ಮಾತುಗಳನ್ನು ಮೋಶೆಗೆ ಹೇಳಿದಂದಿನಿಂದ ಇಸ್ರಾಯೇಲ್ಯರು ಅರಣ್ಯದಲ್ಲಿ ಅಲೆಯುತ್ತಿದ್ದ ವರುಷಗಳೂ ಸೇರಿ ನಾಲ್ವತ್ತೈದು ವರುಷಗಳು ದಾಟಿದವು. ಯೆಹೋವನು ತಾನು ನುಡಿದಂತೆಯೇ ಈ ಕಾಲವೆಲ್ಲಾ ನನ್ನನ್ನು ಜೀವದಿಂದುಳಿಸಿದ್ದಾನೆ. ಈಗ ನಾನು ಎಂಭತ್ತೈದು ವರುಷದವನಾಗಿದ್ದೇನೆ.
Kannada Bible (KNCL) BSI 2016
ಸರ್ವೇಶ್ವರ ಈ ಮಾತುಗಳನ್ನು ಮೋಶೆಗೆ ಹೇಳಿದಂದಿನಿಂದ ಇಸ್ರಯೇಲರು ಅರಣ್ಯದಲ್ಲಿ ಅಲೆಯುತ್ತಿದ್ದ ವರ್ಷಗಳೂ ಸೇರಿ ನಾಲ್ವತ್ತೈದು ವರ್ಷಗಳು ದಾಟಿದವು. ಸರ್ವೇಶ್ವರ ತಾವು ನುಡಿದಂತೆಯೇ ಈ ಕಾಲವೆಲ್ಲ ನನ್ನನ್ನು ಜೀವದಿಂದುಳಿಸಿದ್ದಾರೆ. ಈಗ ನನಗೆ ಎಂಬತ್ತೈದು ವರ್ಷ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಈಗ ಯೆಹೋವ ದೇವರು ಮೋಶೆಗೆ ಈ ವಾಕ್ಯವನ್ನು ಹೇಳಿದಂದಿನಿಂದ ಇಸ್ರಾಯೇಲರು ಮರುಭೂಮಿಯಲ್ಲಿ ಸಂಚರಿಸಿದ ನಾಲ್ವತ್ತೈದು ವರ್ಷ ಯೆಹೋವ ದೇವರು ಹೇಳಿದ ಹಾಗೆಯೇ ನನ್ನನ್ನು ಜೀವದಿಂದ ಇಟ್ಟಿದ್ದಾರೆ. ಈಗ ನಾನು ಇಂದು ಎಂಬತ್ತೈದು ವರ್ಷ ಪ್ರಾಯದವನಾಗಿದ್ದೇನೆ.