Joshua 14:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮೋಶೆಯು ನನ್ನನ್ನು ಕಳುಹಿಸಿ ಕೊಟ್ಟಾಗ ನಾನು ದೃಢಕಾಯನಾಗಿದ್ದಂತೆಯೇ ಈಗಲೂ ಸಹ ದೃಢಕಾಯನಾಗಿದ್ದೇನೆ. ಆಗ ನಾನು ಯುದ್ಧಮಾಡಲು ಹೇಗೆ ಸಿದ್ಧವಾಗಿರುತ್ತಿದ್ದೆನೋ ಅದೇ ರೀತಿ ಈಗಲೂ ಸಿದ್ಧನಾಗಿದ್ದೇನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೋಶೆಯು ನನ್ನನ್ನು ಕಳುಹಿಸಿದಾಗ ನನಗೆಷ್ಟು ಬಲವಿತ್ತೋ ಈಗಲೂ ಅಷ್ಟೇ ಬಲವಿದೆ. ಯುದ್ಧಮಾಡುವುದಕ್ಕೂ ವಿಶೇಷ ಕಾರ್ಯಗಳನ್ನು ನಿರ್ವಹಿಸುವುದಕ್ಕೂ ನನಗೆ ಮೊದಲಿನಂತೆಯೇ ಈಗಲೂ ಬಲವಿದೆ.
Kannada BSI Bible 2016
ಮೋಶೆ ನನ್ನನ್ನು ಕಳುಹಿಸಿದ ದಿವಸದಲ್ಲಿ ನಾನು ಹೇಗೆ ಬಲವಾಗಿ ಇದ್ದೆನೋ ಹಾಗೆಯೇ ಇದು ವರೆಗೂ ಬಲವಾಗಿದ್ದೇನೆ. ನಾನು ಯುದ್ಧಕ್ಕೆ ಹೋಗಿ ಬರುವದಕ್ಕೆ ನನಗೆ ಆಗ ಇದ್ದ ಶಕ್ತಿಯ ಹಾಗೆಯೇ ಈಗಲೂ ಶಕ್ತಿಯುಳ್ಳ ವನಾಗಿದ್ದೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಮೋಶೆಯು ನನ್ನನ್ನು ಕಳುಹಿಸಿದಾಗ ನನಗೆಷ್ಟು ಬಲವಿತ್ತೋ ಈಗಲೂ ಅಷ್ಟಿದೆ. ಯುದ್ಧಮಾಡುವದಕ್ಕೂ ವಿಶೇಷ ಕಾರ್ಯಗಳನ್ನು ನಿರ್ವಹಿಸುವದಕ್ಕೂ ನನಗೆ ಮುಂಚಿನಂತೆಯೇ ಶಕ್ತಿಯಿರುತ್ತದೆ.
Kannada Bible (KNCL) BSI 2016
ಮೋಶೆ ನನ್ನನ್ನು ಕಳಿಸಿದಾಗ ನನಗೆಷ್ಟು ಬಲವಿತ್ತೋ ಈಗಲೂ ಅಷ್ಟೇ ಬಲವಿದೆ. ಯುದ್ಧಮಾಡುವುದಕ್ಕೂ ವಿಶೇಷ ಕಾರ್ಯಗಳನ್ನು ನಿರ್ವಹಿಸುವುದಕ್ಕೂ ನನಗೆ ಮುಂಚಿನಂತೆಯೇ ಶಕ್ತಿಯಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮೋಶೆ ನನ್ನನ್ನು ಕಳುಹಿಸಿದ ದಿವಸದಲ್ಲಿ ನಾನು ಹೇಗೆ ಬಲಿಷ್ಠನಾಗಿ ಇದ್ದೆನೋ, ಹಾಗೆಯೇ ಈಗಲೂ ಬಲಿಷ್ಠನಾಗಿದ್ದೇನೆ. ನಾನು ಯುದ್ಧ ಮಾಡುವದಕ್ಕೂ ವಿಶೇಷ ಕಾರ್ಯಗಳನ್ನು ನಿರ್ವಹಿಸುವದಕ್ಕೂ ನನಗೆ ಆಗ ಇದ್ದ ಶಕ್ತಿಯ ಹಾಗೆಯೇ ಈಗಲೂ ಶಕ್ತಿಯುಳ್ಳವನಾಗಿದ್ದೇನೆ.