Joshua 14:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಎರಡುವರೆ ಕುಲಗಳ ಜನರಿಗೆ ಮೋಶೆಯು ಜೋರ್ಡನ್ ನದಿಯ ಪೂರ್ವದಿಕ್ಕಿನ ಪ್ರದೇಶವನ್ನು ಕೊಟ್ಟಿದ್ದನು. ಆದರೆ ಲೇವಿಯ ಕುಲದವರಿಗೆ ಉಳಿದವರಂತೆ ಯಾವ ಪ್ರದೇಶವನ್ನೂ ಕೊಡಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಉಳಿದ ಎರಡುವರೆ ಕುಲಗಳ ಜನರಿಗೆ ಯೊರ್ದನಿನ ಆಚೆಯಲ್ಲಿ ಮೋಶೆಯೇ ಸ್ವತ್ತನ್ನು ಕೊಟ್ಟಿದ್ದನು. ಲೇವಿಯರಿಗೆ ಮಾತ್ರ ಕೊಟ್ಟಿರಲಿಲ್ಲ.
Kannada BSI Bible 2016
ಮೋಶೆಯು ಯೊರ್ದನಿಗೆ ಆಚೆ ಎರಡುವರೆ ಗೋತ್ರಗಳಿಗೆ ಬಾಧ್ಯತೆಯನ್ನು ಕೊಟ್ಟಿದ್ದನು. ಆದರೆ ಲೇವಿಯರಿಗೆ ಯಾವ ಬಾಧ್ಯತೆಯನ್ನೂ ಕೊಡಲಿಲ್ಲ;
Kannada BSI JV (ಕನ್ನಡ ಸತ್ಯವೇದವು J.V. (BSI))
ಉಳಿದ ಎರಡುವರೆ ಕುಲಗಳ ಜನರಿಗೆ ಯೊರ್ದನಿನ ಆಚೆಯಲ್ಲಿ ಮೋಶೆಯೇ ಸ್ವಾಸ್ತ್ಯವನ್ನು ಕೊಟ್ಟಿದ್ದನು.
Kannada Bible (KNCL) BSI 2016
ಉಳಿದ ಎರಡುವರೆ ಕುಲಗಳ ಜನರಿಗೆ ಜೋರ್ಡನಿನ ಆಚೆಯಲ್ಲಿ ಮೋಶೆಯೇ ಸೊತ್ತನ್ನು ಕೊಟ್ಟಿದ್ದನು. ಲೇವಿಯರಿಗೆ ಮಾತ್ರ ಕೊಡಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ ಮೋಶೆಯು ಯೊರ್ದನ್ ನದಿ ಆಚೆ ಎರಡೂವರೆ ಗೋತ್ರಗಳಿಗೆ ಸೊತ್ತನ್ನು ಕೊಟ್ಟಿದ್ದನು. ಆದರೆ ಲೇವಿಯರಿಗೆ ಯಾವ ಸೊತ್ತನ್ನೂ ಕೊಡಲಿಲ್ಲ,