Joshua 14:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನ ಸೇವಕನಾದ ಮೋಶೆಯು, ಈ ದೇಶದಲ್ಲಿ ಗೂಢಚರ್ಯ ಮಾಡುವುದಕ್ಕೆ ನನ್ನನ್ನು ಕಳುಹಿಸಿದ್ದನು. ಆಗ ನನಗೆ ನಲವತ್ತು ವರ್ಷವಾಗಿತ್ತು. ನಾನು ಹಿಂತಿರುಗಿ ಬಂದಾಗ ಈ ದೇಶದ ಬಗ್ಗೆ ದೇವರ ವಾಗ್ದಾನಗಳನ್ನು ನಂಬಿ ಯಥಾರ್ಥವಾದ ಸಂಗತಿಗಳನ್ನು ಮೋಶೆಗೆ ಹೇಳಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನ ಸೇವಕನಾದ ಮೋಶೆಯು ಈ ದೇಶವನ್ನು ಸಂಚರಿಸಿ ನೋಡುವುದಕ್ಕೋಸ್ಕರ ಕಾದೇಶ್ ಬರ್ನೇಯದಿಂದ ನನ್ನನ್ನು ಕಳುಹಿಸಿದಾಗ ನನಗೆ ನಲ್ವತ್ತು ವರ್ಷವಾಗಿತ್ತು.
Kannada BSI Bible 2016
ಕರ್ತನ ಸೇವಕನಾದ ಮೋಶೆಯು ದೇಶವನ್ನು ಪಾಳತಿ ನೋಡಲು ನನ್ನನ್ನು ಕಾದೇಶ್ ಬರ್ನೇಯದಿಂದ ಕಳುಹಿಸಿದಾಗ ನಾನು ನಾಲ್ವತ್ತು ವರುಷ ಪ್ರಾಯದವನಾಗಿದ್ದೆನು; ನನ್ನ ಹೃದಯದಲ್ಲಿ ಇದ್ದ ಹಾಗೆಯೇ ಅವನಿಗೆ ಒಂದು ಮಾತನ್ನು ತಿರಿಗಿ ತಕ್ಕೊಂಡು ಬಂದೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನ ಸೇವಕನಾದ ಮೋಶೆಯು ಈ ದೇಶವನ್ನು ಸಂಚರಿಸಿನೋಡುವದಕ್ಕೋಸ್ಕರ ಕಾದೇಶ್‍ಬರ್ನೇಯದಿಂದ ನನ್ನನ್ನು ಕಳುಹಿಸಿದಾಗ ನನಗೆ ನಾಲ್ವತ್ತು ವರುಷವಾಗಿತ್ತು.
Kannada Bible (KNCL) BSI 2016
ಸರ್ವೇಶ್ವರನ ದಾಸನಾದ ಮೋಶೆ ಈ ನಾಡನ್ನು ಸಂಚರಿಸಿ ನೋಡುವುದಕ್ಕೆ ಕಾದೇಶ್ ಬರ್ನೇಯದಿಂದ ನನ್ನನ್ನು ಕಳಿಸಿದಾಗ ನನಗೆ ನಾಲ್ವತ್ತು ವರುಷ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇಶವನ್ನು ಸಂಚರಿಸಿ ನೋಡಲು ಯೆಹೋವ ದೇವರ ಸೇವಕನಾದ ಮೋಶೆಯು ನನ್ನನ್ನು ಕಾದೇಶ್ ಬರ್ನೇಯದಿಂದ ಕಳುಹಿಸುವಾಗ ನಾನು ನಾಲ್ವತ್ತು ವರ್ಷ ಪ್ರಾಯದವನಾಗಿದ್ದೆನು. ನನ್ನ ಮನಸ್ಸಿಗೆ ಬಂದಿದ್ದ ವರದಿಯನ್ನು ತಂದು ತಿಳಿಸಿದೆನು.