Joshua 14:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದ್ದರಿಂದ ಮೋಶೆಯು ಅಂದು ನನಗೆ, “ನೀನು ಸಂಚರಿಸಿ ನೋಡಿದ ಆ ಭೂಮಿಯು ನಿನ್ನ ಸ್ವಂತ ಭೂಮಿಯಾಗುತ್ತದೆ. ನಿನ್ನ ಮಕ್ಕಳು ಶಾಶ್ವತವಾಗಿ ಅದರ ಸ್ವಾಸ್ತ್ಯವನ್ನು ಹೊಂದಿರುತ್ತಾರೆ. ನೀನು ನನ್ನ ದೇವರಾದ ಯೆಹೋವನಲ್ಲಿ ನಿಜವಾದ ನಂಬಿಕೆ ಇಟ್ಟಿದ್ದಕ್ಕಾಗಿ ಆ ಪ್ರದೇಶವನ್ನು ನಿನಗೆ ಕೊಡುತ್ತೇನೆ’ ಎಂದು ವಾಗ್ದಾನ ಮಾಡಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೋಶೆಯು ಆ ದಿನ ನನಗೆ ‘ನೀನು ಪೂರ್ಣಮನಸ್ಸಿನಿಂದ ನನ್ನ ದೇವರಾದ ಯೆಹೋವನನ್ನು ಅನುಸರಿಸಿದ್ದರಿಂದ ನೀನು ಸಂಚರಿಸಿದ ಪ್ರದೇಶವು ನಿನಗೂ ನಿನ್ನ ಸಂತಾನದವರಿಗೂ ಶಾಶ್ವತ ಸ್ವತ್ತಾಗಿರುವುದು’ ಎಂದು ಪ್ರಮಾಣ ಮಾಡಿ ಹೇಳಿದನು.
Kannada BSI Bible 2016
ಆ ದಿನದಲ್ಲಿ ಮೋಶೆಯು ನನಗೆ--ನೀನು ನನ್ನ ದೇವರಾದ ಕರ್ತನನ್ನು ಪೂರ್ಣ ಮನಸ್ಸಿನಿಂದ ಹಿಂಬಾಲಿಸಿದ್ದರಿಂದ ನಿನ್ನ ಕಾಲು ತುಳಿದ ದೇಶವು ನಿನಗೂ ನಿನ್ನ ಮಕ್ಕಳಿಗೂ ಎಂದೆಂದಿಗೂ ಬಾಧ್ಯತೆಯಾಗಿರುವದು ಎಂದು ಆಣೆ ಇಟ್ಟು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮೋಶೆಯು ಆ ದಿವಸ - ನೀನು ಪೂರ್ಣಮನಸ್ಸಿನಿಂದ ನನ್ನ ದೇವರಾದ ಯೆಹೋವನನ್ನು ಹೊಂದಿಕೊಂಡದರಿಂದ ನೀನು ಸಂಚರಿಸಿದ ಪ್ರದೇಶವು ನಿನಗೂ ನಿನ್ನ ಸಂತಾನದವರಿಗೂ ಶಾಶ್ವತ ಸ್ವಾಸ್ತ್ಯವಾಗುವದು ಎಂದು ಪ್ರಮಾಣಮಾಡಿ ನನಗೆ ಹೇಳಿದನು.
Kannada Bible (KNCL) BSI 2016
ಮೋಶೆ ಅಂದು ನನಗೆ, ‘ನೀನು ಪೂರ್ಣ ಮನಸ್ಸಿನಿಂದ ನನ್ನ ದೇವರಾದ ಸರ್ವೇಶ್ವರನನ್ನೇ ಶ್ರದ್ಧೆಯಿಂದ ಅನುಸರಿಸಿದ ಕಾರಣ ನೀನು ಸಂಚರಿಸಿದ ಪ್ರದೇಶ ನಿನಗೂ ನಿನ್ನ ಸಂತಾನದವರಿಗೂ ಶಾಶ್ವತ ಸೊತ್ತಾಗುವುದು,’ ಎಂದು ಪ್ರಮಾಣಮಾಡಿ ಹೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ದಿವಸದಲ್ಲಿ ಮೋಶೆಯು ನನಗೆ, ‘ನೀನು ನನ್ನ ದೇವರಾದ ಯೆಹೋವ ದೇವರನ್ನು ಪೂರ್ಣಹೃದಯದಿಂದ ಹಿಂಬಾಲಿಸಿದ ಕಾರಣ, ನಿನ್ನ ಪಾದ ಮೆಟ್ಟಿದ ದೇಶವು ನಿನಗೂ, ನಿನ್ನ ಮಕ್ಕಳಿಗೂ ಎಂದೆಂದಿಗೂ ಬಾಧ್ಯತೆಯಾಗಿರುವುದು,’ ಎಂದು ಆಣೆ ಇಟ್ಟು ಹೇಳಿದನು.