Joshua 15:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮೆಡಿಟರೆನಿಯನ್ ಸಮುದ್ರತೀರವೇ ಯೆಹೂದ್ಯರ ಸ್ವಾಸ್ತ್ಯದ ಪಶ್ಚಿಮ ಸೀಮೆಯಾಗಿತ್ತು. ಹೀಗೆ ಯೆಹೂದ್ಯರ ಸ್ವಾಸ್ತ್ಯವು ಈ ನಾಲ್ಕು ಸೀಮೆಯ ಒಳಗಡೆ ಇತ್ತು. ಯೆಹೂದ್ಯರ ಗೋತ್ರಗಳು ಈ ಪ್ರದೇಶದಲ್ಲಿದ್ದವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮಹಾಸಾಗರದ ತೀರವೇ ಪಶ್ಚಿಮ ಮೇರೆಯು. ಯೆಹೂದಾ ಗೋತ್ರಗಳ ದೇಶದ ಸುತ್ತಣ ಮೇರೆಗಳು ಇವೇ.
Kannada BSI Bible 2016
ಅದು ಪಶ್ಚಿಮದ ಮೇರೆಯ ದೊಡ್ಡ ಸಮುದ್ರವಾಗಿದೆ. ಇದೇ ಯೂದನ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ ಉಂಟಾದ ಸುತ್ತಲಿರುವ ಮೇರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಮಹಾಸಾಗರದ ತೀರವೇ ಪಶ್ಚಿಮ ಮೇರೆಯು. ಯೆಹೂದ ಗೋತ್ರಗಳ ದೇಶದ ಸುತ್ತಣ ಮೇರೆಗಳು ಇವೇ.
Kannada Bible (KNCL) BSI 2016
ಮಹಾಸಾಗರದ ತೀರವೇ ಪಶ್ಚಿಮ ಎಲ್ಲೆ, ಯೆಹೂದ ಗೋತ್ರಗಳ ನಾಡಿನ ಸುತ್ತಣ ಎಲ್ಲೆಗಳು ಇವೇ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದು ಪಶ್ಚಿಮದ ಮೇರೆಯ ಮೆಡಿಟರೇನಿಯನ್ ಮಹಾಸಾಗರವಾಗಿದೆ. ಇದೇ ಯೆಹೂದ ಗೋತ್ರದವರಿಗೆ ಅವರ ಕುಟುಂಬಗಳ ಪ್ರಕಾರ ಉಂಟಾದ ಸುತ್ತಲಿರುವ ಮೇರೆ.