Joshua 15:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಫುನ್ನೆಯ ಮಗನಾದ ಕಾಲೇಬನಿಗೆ ಯೆಹೂದ ಕುಲದವರ ಸ್ವಾಸ್ತ್ಯದಲ್ಲಿಯೇ ಸ್ವಲ್ಪ ಪ್ರದೇಶವನ್ನು ಕೊಡಬೇಕೆಂದು ದೇವರು ಯೆಹೋಶುವನಿಗೆ ಹೇಳಿದ್ದನು. ಅದಕ್ಕಾಗಿ ಯೆಹೋಶುವನು ಕಾಲೇಬನಿಗೆ ದೇವರು ಆಜ್ಞಾಪಿಸಿದ ಪ್ರದೇಶವನ್ನು ಕೊಟ್ಟನು. ಯೆಹೋಶುವನು ಅವನಿಗೆ ಹೆಬ್ರೋನ್ ಎಂಬ ಕಿರ್ಯಾತ್ ಅರ್ಬ ಊರನ್ನು ಕೊಟ್ಟನು. (ಅರ್ಬನು ಅನಾಕನ ತಂದೆ.)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋಶುವನು ಯೆಹೋವನ ಅಪ್ಪಣೆಯಂತೆ ಯೆಫುನ್ನೆಯ ಮಗನಾದ ಕಾಲೇಬನಿಗೆ ಯೆಹೂದ ಕುಲದವರ ಮಧ್ಯದಲ್ಲಿಯೇ ಅನಾಕನ ತಂದೆಯಾದ ಅರ್ಬನ ಪಟ್ಟಣವಾಗಿದ್ದ ಹೆಬ್ರೋನನ್ನು ಕೊಟ್ಟನು.
Kannada BSI Bible 2016
ಇದಲ್ಲದೆ ಕರ್ತನು ತನಗೆ ಆಜ್ಞಾಪಿಸಿದ ಪ್ರಕಾರ ಯೆಹೋಶುವನು ಯೆಫುನ್ನೆಯ ಮಗನಾದ ಕಾಲೇಬ ನಿಗೆ ಅನಾಕನ ತಂದೆಯ ಕಿರ್ಯಾತ್‌ಅರ್ಬ ಎಂಬ ಹೆಬ್ರೋನನ್ನು ಯೂದನ ಮಕ್ಕಳ ನಡುವೆ ಪಾಲಾಗಿ ಕೊಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋಶುವನು ಯೆಹೋವನ ಅಪ್ಪಣೆಯಂತೆ ಯೆಫುನ್ನೆಯ ಮಗನಾದ ಕಾಲೇಬನಿಗೆ ಯೆಹೂದ ಕುಲದವರ ಮಧ್ಯದಲ್ಲಿಯೇ ಅನಾಕನ ತಂದೆಯಾದ ಅರ್ಬನ ಪಟ್ಟಣವಾಗಿದ್ದ ಹೆಬ್ರೋನನ್ನು ಕೊಟ್ಟನು.
Kannada Bible (KNCL) BSI 2016
ಯೆಹೋಶುವನು ಸರ್ವೇಶ್ವರನ ಅಪ್ಪಣೆಯಂತೆ ಯೆಫುನ್ನೆಯ ಮಗ ಕಾಲೇಬನಿಗೆ ಯೆಹೂದ ಕುಲದವರ ನಡುವೆ ಅನಾಕನ ತಂದೆ ಆದ ಅರ್ಬನ ನಗರವಾಗಿದ್ದ ಹೆಬ್ರೋನನ್ನು ಕೊಟ್ಟನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ಯೆಹೋಶುವನು ಯೆಹೋವ ದೇವರ ಅಪ್ಪಣೆಯ ಪ್ರಕಾರ ಯೆಫುನ್ನೆಯ ಮಗ ಕಾಲೇಬನಿಗೆ ಅನಾಕನ ತಂದೆಯ ಕಿರ್ಯತ್ ಅರ್ಬ ಎಂಬ ಹೆಬ್ರೋನನ್ನು ಯೆಹೂದನ ಮಕ್ಕಳ ನಡುವೆ ಸೊತ್ತಾಗಿ ಕೊಟ್ಟನು.