Joshua 15:17 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಕೆನಜನ ಮಗನಾದ ಒತ್ನೀಯೇಲನು ಆ ಪಟ್ಟಣವನ್ನು ಗೆದ್ದನು. ಕಾಲೇಬನು ತನ್ನ ಮಗಳಾದ ಅಕ್ಷಾಳನ್ನು ಒತ್ನೀಯೇಲನಿಗೆ ಮದುವೆ ಮಾಡಿಕೊಟ್ಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕೆನಜನ ಮಗನೂ ಕಾಲೇಬನ ತಮ್ಮನೂ ಆದ ಒತ್ನೀಯೇಲನು ಅದನ್ನು ವಶಪಡಿಸಿಕೊಂಡನು. ಅವನಿಗೆ ಕಾಲೇಬನ ಮಗಳಾದ ಅಕ್ಷಾಳನ್ನು ಮದುವೆಮಾಡಿಕೊಟ್ಟನು.
Kannada BSI Bible 2016
ಆಗ ಕೆನಜನ ಮಗನೂ ಕಾಲೇಬನ ಸಹೋದರನೂ ಆದ ಒತ್ನೀಯೇಲನು ಅದನ್ನು ಹಿಡಿದನು. ಅವನು ತನ್ನ ಮಗಳಾದ ಅಕ್ಷಾಳನ್ನು ಅವನಿಗೆ ಮದುವೆಮಾಡಿ ಕೊಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕೆನಜನ ಮಗನೂ ಕಾಲೇಬನ ತಮ್ಮನೂ ಆದ ಒತ್ನೀಯೇಲನು ಅದನ್ನು ತೆಗೆದುಕೊಳ್ಳಲು ಅವನಿಗೆ ತನ್ನ ಮಗಳಾದ ಅಕ್ಷಾ ಎಂಬಾಕೆಯನ್ನು ಮದುವೆಮಾಡಿಕೊಟ್ಟನು.
Kannada Bible (KNCL) BSI 2016
ಕೆನಜನ ಮಗನೂ ಕಾಲೇಬನ ತಮ್ಮನೂ ಆದ ಒತ್ನಿಯೇಲನು ಅದರ ಮೇಲೆ ದಾಳಿಮಾಡಿ ತೆಗೆದುಕೊಂಡನು. ಅವನಿಗೆ ಕಾಲೇಬನು ತನ್ನ ಮಗಳಾದ ಅಕ್ಷಾ ಎಂಬಾಕೆಯನ್ನು ಮದುವೆ ಮಾಡಿಕೊಟ್ಟನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಕಾಲೇಬನ ತಮ್ಮನಾದ ಕೆನಾಜನ ಮಗನಾದ ಒತ್ನಿಯೇಲನು ಅದನ್ನು ಹಿಡಿದನು. ಅನಂತರ ಕಾಲೇಬನು ತನ್ನ ಮಗಳಾದ ಅಕ್ಸಾ ಎಂಬಾಕೆಯನ್ನು ಅವನಿಗೆ ಮದುವೆ ಮಾಡಿಕೊಟ್ಟನು.