Joshua 15:18 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಒತ್ನೀಯೇಲನ ಮನೆಗೆ ಅಕ್ಷಾ ಹೋದಳು. ಕಾಲೇಬನಿಂದ ಇನ್ನಷ್ಟು ಭೂಮಿಯನ್ನು ಕೇಳಲು ಅಕ್ಷಾಳನ್ನು ಒತ್ನೀಯೇಲನು ಪ್ರೇರೇಪಿಸಿದನು. ಅಕ್ಷಾಳು ತನ್ನ ತಂದೆಯ ಬಳಿಗೆ ಬಂದು ಕತ್ತೆಯ ಮೇಲಿಂದ ಇಳಿದಾಗ, “ನಿನಗೆ ಏನುಬೇಕು?” ಎಂದು ಕಾಲೇಬನು ಕೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಕೆಯು ತನ್ನ ತಂದೆಯ ಮನೆ ಸೇರಿದಾಗ, ತನ್ನ ತಂದೆಯ ಹತ್ತಿರ ಭೂಮಿಯನ್ನು ಕೇಳಬೇಕೆಂದು ಗಂಡನನ್ನು ಪ್ರೇರೇಪಿಸಿ ತಾನು ಕತ್ತೆಯ ಮೇಲಿಂದ ಇಳಿದಳು ಕಾಲೇಬನು, “ನಿನಗೇನು ಬೇಕು” ಎಂದು ಆಕೆಯನ್ನು ಕೇಳಲು
Kannada BSI Bible 2016
ಅವಳು ಬಂದಾಗ ತನ್ನ ತಂದೆಯಿಂದ ಒಂದು ಹೊಲವನ್ನು ಕೇಳುವದಕ್ಕೆ ಅವನನ್ನು ಪ್ರೇರೇಪಿಸಿ ತಾನು ಕತ್ತೆಯ ಮೇಲಿನಿಂದ ಇಳಿದಳು. ಆಗ ಕಾಲೇಬನು ಅವಳನ್ನು ನೋಡಿ--ನಿನಗೆ ಏನು ಬೇಕು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಕೆಯು ಬರುತ್ತಿರುವಾಗ ತನ್ನ ತಂದೆಯ ಹತ್ತಿರ ಭೂವಿುಯನ್ನು ಕೇಳಬೇಕೆಂದು ಗಂಡನನ್ನು ಪ್ರೇರೇಪಿಸಿ ತಾನು ಕತ್ತೆಯ ಮೇಲಿಂದ ಇಳಿದಳು. ಕಾಲೇಬನು ನಿನಗೇನು ಬೇಕೆಂದು ಆಕೆಯನ್ನು ಕೇಳಲು ಆಕೆಯು -
Kannada Bible (KNCL) BSI 2016
ಆಕೆ ಮನೆ ಸೇರಿದಾಗ ತನ್ನ ತಂದೆಯ ಬಳಿ ಭೂಮಿಯನ್ನು ಕೇಳಬೇಕೆಂದು ಒತ್ನಿಯೇಲನು ಅವಳನ್ನು ಪ್ರೋತ್ಸಾಹಿಸಿದನು. ಅಂತೆಯೇ ಅವಳು ಹೊರಟು ಹೇಸರಗತ್ತೆ ಮೇಲಿಂದ ಇಳಿದದ್ದೇ ಕಾಲೇಬನು, “ನಿನಗೇನು ಬೇಕು?” ಎಂದು ಕೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಒಂದು ದಿನ ಅಕ್ಷಾ ಒತ್ನಿಯೇಲನೊಂದಿಗೆ ಬರುತ್ತಿರುವಾಗ ತನ್ನ ತಂದೆಯ ಹತ್ತಿರ ಇನ್ನೂ ಒಂದು ಹೊಲವನ್ನು ಕೇಳುವುದಕ್ಕೆ ಅವನನ್ನು ಪ್ರೇರೇಪಿಸಿ, ಕತ್ತೆಯ ಮೇಲಿನಿಂದ ಇಳಿದಳು. ಆಗ ಕಾಲೇಬನು ಅವಳಿಗೆ, “ನಿನಗೆ ಏನು ಬೇಕು?” ಎಂದನು.