Joshua 15:19 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅದಕ್ಕೆ ಅವಳು “ನನ್ನನ್ನು ಆಶೀರ್ವದಿಸು. ನೀನು ನನಗೆ ನೆಗೆವ್‌ನಲ್ಲಿ ಮರುಭೂಮಿಯನ್ನು ಕೊಟ್ಟಿರುವೆ. ದಯವಿಟ್ಟು ನೀರಿರುವ ಭೂಮಿಯನ್ನು ಸ್ವಲ್ಪಕೊಡು” ಎಂದು ಕೇಳಿಕೊಂಡಳು. ಅವಳ ಕೋರಿಕೆಗನುಸಾರವಾಗಿ ಕಾಲೇಬನು ಮೇಲಿನ ಮತ್ತು ಕೆಳಗಿನ ನೀರಿನ ಬುಗ್ಗೆಗಳನ್ನು ಕೊಟ್ಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಕೆಯು “ನನಗೊಂದು ಕೊಡುಗೆ ಬೇಕು. ನನ್ನನ್ನು ದಕ್ಷಿಣ ದೇಶದ ಬೆಂಗಾಡಿಗೆ (ಬರಡು ಭೂಮಿ) ಕೊಟ್ಟುಬಿಟ್ಟೆಯಲ್ಲಾ? ಬುಗ್ಗೆಗಳಿರುವ ಸ್ಥಳವನ್ನು ನನಗೆ ಕೊಡು” ಎಂದಳು. ಆಗ ಅವನು ಆಕೆಗೆ ಮೇಲಣ ಮತ್ತು ಕೆಳಗಣ ಬುಗ್ಗೆಗಳನ್ನು ಕೊಟ್ಟನು.
Kannada BSI Bible 2016
ಅದಕ್ಕೆ ಅವಳು--ನನಗೆ ಒಂದು ಆಶೀರ್ವಾದ ಕೊಡು; ಯಾಕಂದರೆ ನನಗೆ ಮೊದಲು ದಕ್ಷಿಣ ಭೂಮಿಯನ್ನು ಕೊಟ್ಟಿ; ನೀರು ಬುಗ್ಗೆಗಳನ್ನು ಸಹ ನನಗೆ ಕೊಡು ಅಂದಳು. ಆಗ ಅವನು ಅವಳಿಗೆ ಮೇಲ್ಭಾಗದಲ್ಲಿಯೂ ಕೆಳಭಾಗದಲ್ಲಿಯೂ ನೀರು ಬುಗ್ಗೆಗಳನ್ನು ಕೊಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನನಗೊಂದು ದಾನ ಕೊಡಬೇಕು; ನನ್ನನ್ನು ಬೆಗ್ಗಾಡಿಗೆ ಕೊಟ್ಟುಬಿಟ್ಟಿಯಲ್ಲಾ; ಬುಗ್ಗೆಗಳಿರುವ ಸ್ಥಳವನ್ನು ನನಗೆ ಕೊಡು ಅಂದಳು. ಆಗ ಅವನು ಆಕೆಗೆ ಮೇಲಣ ಮತ್ತು ಕೆಳಗಣ ಬುಗ್ಗೆಗಳನ್ನು ಕೊಟ್ಟನು.
Kannada Bible (KNCL) BSI 2016
ಅವಳು, “ನನಗೊಂದು ಕೊಡುಗೆ ಬೇಕು. ನನ್ನನ್ನು ಬೆಂಗಾಡಿಗೆ ಕೊಟ್ಟುಬಿಟ್ಟಿದ್ದೀರಲ್ಲವೆ? ಬುಗ್ಗೆಗಳಿರುವ ಸ್ಥಳವನ್ನು ನನಗೆ ಕೊಡಿ,” ಎಂದಳು. ಆಗ ಕಾಲೇಬನು ಅವಳಿಗೆ ಬುಗ್ಗೆಗಳಿದ್ದ ಮೇಲಣ ಹಾಗೂ ಕೆಳಗಣ ಸ್ಥಳಗಳನ್ನು ಕೊಟ್ಟನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದಕ್ಕೆ ಅವಳು ಅವನಿಗೆ, “ನನಗೆ ಒಂದು ಸಹಾಯಮಾಡಬೇಕು. ಮೊದಲು ದಕ್ಷಿಣ ಹೊಲವನ್ನು ಕೊಟ್ಟೆ; ನೀರಿನ ಬುಗ್ಗೆಗಳನ್ನು ಸಹ ನೀನು ನನಗೆ ಕೊಡು,” ಎಂದಳು. ಆಗ ಕಾಲೇಬನು ಅವಳಿಗೆ ಮೇಲಿನ ಹಾಗೂ ಕೆಳಗಿನ ನೀರಿನ ಬುಗ್ಗೆಗಳನ್ನು ಕೊಟ್ಟನು.