Joshua 15:63 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಜೆರುಸಲೇಮಿನಲ್ಲಿ ವಾಸವಾಗಿದ್ದ ಯೆಬೂಸಿಯರನ್ನು ಹೊರಹಾಕಲು ಯೆಹೂದ ಕುಲದವರಿಗೆ ಸಾಧ್ಯವಾಗಲಿಲ್ಲ. ಆದ್ದರಿಂದ ಯೆಬೂಸಿಯರು ಇಂದಿನವರೆಗೂ ಜೆರುಸಲೇಮಿನಲ್ಲಿ ಯೆಹೂದ ಕುಲದವರೊಡನೆ ವಾಸವಾಗಿದ್ದಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆರೂಸಲೇಮಿನಲ್ಲಿ ವಾಸವಾಗಿದ್ದ ಯೆಬೂಸಿಯರನ್ನು ಹೊರಡಿಸಲು ಯೆಹೂದ ಕುಲದವರಿಂದ ಆಗದೆ ಹೋಯಿತು. ಆದುದರಿಂದ ಅವರು ಇಂದಿನವರೆಗೂ ಯೆಹೂದ ಕುಲದವರೊಡನೆ ಯೆರೂಸಲೇಮಿನಲ್ಲೇ ವಾಸವಾಗಿದ್ದಾರೆ.
Kannada BSI Bible 2016
ಆದರೆ ಯೆರೂಸಲೇಮಿನಲ್ಲಿ ವಾಸವಾಗಿದ್ದ ಯೆಬೂಸಿಯರನ್ನು ಯೂದನ ಮಕ್ಕಳು ಹೊರಡಿಸಿ ಬಿಡುವದಕ್ಕಾಗಲಿಲ್ಲ. ಆದದರಿಂದ ಈ ದಿವಸದ ವರೆಗೂ ಯೆಬೂಸಿಯರು ಯೂದನ ಮಕ್ಕಳ ಸಂಗಡ ಯೆರೂಸಲೇಮಿನಲ್ಲಿ ವಾಸವಾಗಿದ್ದಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆರೂಸಲೇವಿುನಲ್ಲಿ ವಾಸವಾಗಿದ್ದ ಯೆಬೂಸಿಯರನ್ನು ಹೊರಡಿಸುವದು ಯೆಹೂದಕುಲದವರಿಂದ ಆಗದೆ ಹೋಯಿತು. ಆದದರಿಂದ ಅವರು ಇಂದಿನವರೆಗೂ ಯೆಹೂದಕುಲದವರೊಡನೆ ಯೆರೂಸಲೇವಿುನಲ್ಲೇ ವಾಸವಾಗಿದ್ದಾರೆ.
Kannada Bible (KNCL) BSI 2016
ಜೆರುಸಲೇಮಿನಲ್ಲಿ ವಾಸವಾಗಿದ್ದ ಯೆಬೂಸಿಯರನ್ನು ಹೊರಡಿಸಲು ಯೆಹೂದ ಕುಲದವರಿಂದ ಆಗದೆ ಹೋಯಿತು. ಆದುದರಿಂದ ಅವರು ಇಂದಿನವರೆಗೂ ಯೆಹೂದ ಕುಲದವರೊಡನೆ ಜೆರುಸಲೇಮಿನಲ್ಲೇ ವಾಸವಾಗಿದ್ದಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಯೆರೂಸಲೇಮಿನಲ್ಲಿ ವಾಸವಾಗಿದ್ದ ಯೆಬೂಸಿಯರನ್ನು ಯೆಹೂದ ಗೋತ್ರದವರಿಂದ ಹೊರಡಿಸಲು ಸಾಧ್ಯವಾಗಲಿಲ್ಲ. ಆದ್ದರಿಂದ ಈ ದಿವಸದವರೆಗೂ ಯೆಬೂಸಿಯರು ಯೆಹೂದ ಗೋತ್ರದವರ ಸಂಗಡ ಯೆರೂಸಲೇಮಿನಲ್ಲಿ ವಾಸವಾಗಿದ್ದಾರೆ.