Joshua 16:1 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೋಸೇಫನ ಕುಟುಂಬದವರು ಈ ಸ್ವಾಸ್ತ್ಯವನ್ನು ಪಡೆದುಕೊಂಡರು. ಅವರ ಸ್ವಾಸ್ತ್ಯವು ಜೋರ್ಡನ್ ನದಿಯಿಂದ (ಜೆರಿಕೊ ಹತ್ತಿರ) ಆರಂಭವಾಗಿ ಜೆರಿಕೊವಿನ ಹಳ್ಳಗಳ ಉದ್ದಕ್ಕೂ ಮುಂದುವರೆದಿದೆ. (ಇದು ಜೆರಿಕೊವಿನ ಪೂರ್ವದಲ್ಲಿದೆ.) ಆ ಸೀಮೆಯು ಜೆರಿಕೊವಿನಿಂದ ಬೇತೇಲಿನ ಬೆಟ್ಟಪ್ರದೇಶಕ್ಕೆ ಮುಂದುವರೆಯುತ್ತದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೋಸೇಫನ ವಂಶದವರಿಗೆ ದೊರಕಿದ ಸ್ವತ್ತಿನ ಮೇರೆಯು: ಯೆರಿಕೋವಿನ ಬಳಿಯಲ್ಲಿ ಯೊರ್ದನ್ ತೀರದಿಂದ ಯೆರಿಕೋವಿನ ಪೂರ್ವದಲ್ಲಿದ್ದ ನದಿ, ಯೆರಿಕೋವಿಗೂ ಬೇತೇಲಿಗೂ ನಡುವೆ ಇರುವ ಬೆಟ್ಟದ ಸೀಮೆಯ ಅರಣ್ಯ ಹಾಗೂ
Kannada BSI Bible 2016
ಯೋಸೇಫನ ಮಕ್ಕಳಿಗೆ ಚೀಟು ಬಿದ್ದ ಪ್ರಕಾರ ಕೊಟ್ಟ ಸ್ವಾಸ್ಥ್ಯದ ಭೂಮಿಯು ಯೆರಿಕೋವಿನ ಬಳಿಯಲ್ಲಿರುವ ಯೊರ್ದನಿನಿಂದ ಮೂಡಲಲ್ಲಿರುವ ಯೆರಿಕೋವಿನ ಜಲದ ವರೆಗೂ ಮತ್ತು ಬೇತೇಲಿನ ಬೆಟ್ಟಗಳ ವರೆಗೂ ಇರುವ ಅರಣ್ಯದ ಮಾರ್ಗವಾಗಿ ಹೋಗಿ
Kannada BSI JV (ಕನ್ನಡ ಸತ್ಯವೇದವು J.V. (BSI))
ಯೋಸೇಫನ ವಂಶದವರಿಗೆ ದೊರಕಿದ ಸ್ವಾಸ್ತ್ಯದ ಮೇರೆಯು ಯೆರಿಕೋವಿನ ಬಳಿಯಲ್ಲಿ ಯೊರ್ದನ್ ತೀರದಿಂದ ತೊಡಗಿ ಯೆರಿಕೋವಿನ ಪೂರ್ವದಲ್ಲಿದ್ದ ಹಳ್ಳ, ಯೆರಿಕೋವಿಗೂ ಬೇತೇಲಿಗೂ ನಡುವೆ ಇರುವ ಬೆಟ್ಟದ ಸೀಮೆಯ ಅರಣ್ಯ,
Kannada Bible (KNCL) BSI 2016
ಜೋಸೆಫನ ವಂಶದವರಿಗೆ ದೊರಕಿದ ಆಸ್ತಿಪಾಸ್ತಿಯ ಎಲ್ಲೆಯು ಜೆರಿಕೋವಿನ ಬಳಿಯಲ್ಲಿ ಜೋರ್ಡನ್ ತೀರದಿಂದ ತೊಡಗಿ ಜೆರಿಕೋವಿನ ಪೂರ್ವದಲ್ಲಿದ್ದ ನದಿ, ಜೆರಿಕೋವಿಗೂ ಬೇತೇಲಿಗೂ ನಡುವೆ ಇರುವ ಮಲೆನಾಡಿನ ಮರುಭೂಮಿ ಹಾಗೂ ಬೇತೇಲ್ ಇವುಗಳ ಮೇಲೆ ಲೂಜಿಗೆ ಹೋಗುತ್ತದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೋಸೇಫನ ಮಕ್ಕಳಿಗೆ ಚೀಟು ಬಿದ್ದ ಪ್ರಕಾರ ಉಂಟಾದ ಸೊತ್ತಿನ ವಿವರ: ಯೆರಿಕೋವಿನ ಬಳಿಯಲ್ಲಿರುವ ಯೊರ್ದನ್ ನದಿಯಿಂದ ಪೂರ್ವದಲ್ಲಿರುವ ಯೆರಿಕೋವಿನ ಜಲದವರೆಗೂ ಮತ್ತು ಬೇತೇಲಿನ ಬೆಟ್ಟಗಳವರೆಗೂ ಇರುವ ಮರುಭೂಮಿಯ ಮಾರ್ಗವಾಗಿ ಹೋಗಿತ್ತು.