Joshua 16:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಎಫ್ರಾಯೀಮಿನ ಜನರಿಗೆ ಗೆಜೆರಿನಲ್ಲಿದ್ದ ಕಾನಾನ್ಯರನ್ನು ಅಲ್ಲಿಂದ ಹೊರದೂಡುವುದು ಸಾಧ್ಯವಾಗಲಿಲ್ಲ. ಅದಕ್ಕಾಗಿ ಇಂದಿಗೂ ಕಾನಾನ್ಯರು ಎಫ್ರಾಯೀಮ್ ಜನರೊಂದಿಗೆ ಇರುತ್ತಾರೆ. ಆದರೆ ಕಾನಾನ್ಯರು ಎಫ್ರಾಯೀಮ್ ಜನರ ದಾಸರಾಗಿದ್ದಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಗೆಜೆರಿನಲ್ಲಿದ್ದ ಕಾನಾನ್ಯರನ್ನು ಹೊರಡಿಸದೆ ಇದ್ದುದರಿಂದ ಅವರು ಇಂದಿನವರೆಗೂ ಎಫ್ರಾಯೀಮ್ಯರ ಮಧ್ಯದಲ್ಲಿ ದಾಸತ್ವದಲ್ಲಿದ್ದುಕೊಂಡು ಅವರಿಗೋಸ್ಕರ ಸೇವೆ ಮಾಡುತ್ತಿದ್ದಾರೆ.
Kannada BSI Bible 2016
ಗೆಜೆರಿನಲ್ಲಿ ವಾಸ ವಾಗಿದ್ದ ಕಾನಾನ್ಯರನ್ನು ಅವರು ಹೊರಡಿಸಿ ಬಿಡದೆ ಹೋದದ್ದರಿಂದ ಕಾನಾನ್ಯರು ಈ ವರೆಗೂ ಅವರಲ್ಲಿ ವಾಸವಾಗಿದ್ದು ಕಪ್ಪಕೊಡುವ ಸೇವಕರಾಗಿದ್ದಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಗೆಜೆರಿನಲ್ಲಿದ್ದ ಕಾನಾನ್ಯರನ್ನು ಹೊರಡಿಸದೆ ಇದ್ದದರಿಂದ ಅವರು ಇಂದಿನವರೆಗೂ ಎಫ್ರಾಯೀಮ್ಯರ ಮಧ್ಯದಲ್ಲಿ ದಾಸತ್ವದಲ್ಲಿದ್ದುಕೊಂಡು ಅವರಿಗೋಸ್ಕರ ಕೆಲಸ ಮಾಡುತ್ತಾರೆ.
Kannada Bible (KNCL) BSI 2016
ಅವರು ಗೆಜೆರಿನಲ್ಲಿದ್ದ ಕಾನಾನ್ಯರನ್ನು ಹೊರಡಿಸದೆ ಹೋದುದರಿಂದ ಅವರು ಇಂದಿಗೂ ಎಫ್ರಯಿಮ್ಯರ ನಡುವೆ ಊಳಿಗದವರಾಗಿದ್ದುಕೊಂಡು ಅವರಿಗೆ ಸೇವೆಮಾಡುತ್ತಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಗೆಜೆರಿನಲ್ಲಿ ವಾಸವಾಗಿದ್ದ ಕಾನಾನ್ಯರನ್ನು ಹೊರಡಿಸದೆ ಇದ್ದುದರಿಂದ, ಎಫ್ರಾಯೀಮ್ಯರ ಮಧ್ಯದಲ್ಲಿ ಕಾನಾನ್ಯರು ಈವರೆಗೂ ಅವರಲ್ಲಿ ದಾಸತ್ವದಲ್ಲಿದ್ದುಕೊಂಡು ಕೆಲಸಮಾಡುವವರಾಗಿದ್ದಾರೆ.