Joshua 16:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ಮೇರೆಯು ತಪ್ಪೂಹದಿಂದ ಪಶ್ಚಿಮದ ಕಡೆಗೆ ಹೋಗುವ ಕಾನಾ ನದಿಗೆ ಹೋಗಿ ಸಮುದ್ರದಲ್ಲಿ ಕೊನೆಗೊಳ್ಳುತ್ತದೆ. ಈ ಪ್ರದೇಶವನ್ನು ಎಫ್ರಾಯೀಮ್ ಕುಲದವರಿಗೆ ಅವರ ಕುಟುಂಬಗಳಿಗನುಸಾರವಾಗಿ ಕೊಡಲಾಗಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದರ ಮೇರೆಯು ತಪ್ಪೂಹದಿಂದ ಪಶ್ಚಿಮದ ಕಡೆಗೆ ಹೋಗುವ ಕಾನಾ ಹಳ್ಳವನ್ನು ಅನುಸರಿಸಿ ಸಮುದ್ರತೀರದಲ್ಲಿ ಮುಕ್ತಾಯಗೊಳ್ಳುತ್ತದೆ. ಎಫ್ರಾಯೀಮ್ ಗೋತ್ರಗಳಿಗೆ ಸಿಕ್ಕಿದ ಸ್ವತ್ತು ಇವುಗಳೇ.
Kannada BSI Bible 2016
ತಪ್ಪೂಹದಿಂದ ಪಶ್ಚಿಮದ ಮೇರೆಯೂ ಕಾನಾ ನದಿಗೆ ಹೋಗಿ ಸಮುದ್ರದಲ್ಲಿ ಮುಗಿಯುವದು. ಇದು ಎಫ್ರಾಯಾ ಮನ ಮಕ್ಕಳ ಗೋತ್ರ, ಅವರ ಕುಂಟುಂಬಗಳ ಪ್ರಕಾರವೇ ಉಂಟಾದ ಬಾಧ್ಯತೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದರ ಮೇರೆಯು ತಪ್ಪೂಹದಿಂದ ಪಶ್ಚಿಮ ಕಡೆಗೆ ಹೋಗುವ ಕಾನಾ ಹಳ್ಳವನ್ನು ಅನುಸರಿಸಿ ಸಮುದ್ರತೀರದಲ್ಲಿ ಮುಗಿಯುತ್ತದೆ. ಎಫ್ರಾಯೀಮ್ ಕುಲದ ಗೋತ್ರಗಳಿಗೆ ಸಿಕ್ಕಿದ ಸ್ವಾಸ್ತ್ಯವು ಇದೇ.
Kannada Bible (KNCL) BSI 2016
ಅದರ ಎಲ್ಲೆ ತಪ್ಪೊಹದಿಂದ ಪಶ್ಚಿಮ ಕಡೆಗೆ ಹೋಗುವ ಕಾನಾ ನದಿಯನ್ನು ಅನುಸರಿಸಿ ಸಮುದ್ರ ತೀರದಲ್ಲಿ ಮುಕ್ತಾಯಗೊಳ್ಳುತ್ತದೆ. ಎಫ್ರಯಿಮ್ ಕುಲದ ಗೋತ್ರಗಳಿಗೆ ಸಿಕ್ಕಿದ ಸೊತ್ತು ಇದೇ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತಪ್ಪೂಹದಿಂದ ಪಶ್ಚಿಮದ ಮೇರೆಯೂ ಕಾನಾ ನದಿಗೆ ಹೋಗಿ ಮೆಡಿಟೆರೆನಿಯನ್ ಸಮುದ್ರದವರೆಗೆ ಮುಗಿಯುವುದು. ಇದು ಎಫ್ರಾಯೀಮನ ಮಕ್ಕಳ ಗೋತ್ರ ಅವರ ಕುಟುಂಬಗಳ ಪ್ರಕಾರವೇ ದೊರೆತ ಸೊತ್ತು.