Joshua 16:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಎಫ್ರಾಯೀಮಿನ ಹಲವಾರು ಗಡಿಯ ಗ್ರಾಮಗಳು ಮನಸ್ಸೆ ಕುಲದವರ ಪ್ರದೇಶದೊಳಗೆ ಸೇರಿಕೊಂಡಿದ್ದವು. ಆದರೂ ಎಫ್ರಾಯೀಮ್ ಜನರು ಆ ಊರುಗಳನ್ನು ಮತ್ತು ಅವುಗಳ ಸುತ್ತಮುತ್ತಲಿನ ಹೊಲಗದ್ದೆಗಳನ್ನು ತಮ್ಮ ಸ್ವತ್ತಾಗಿ ಮಾಡಿಕೊಂಡಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ ಎಫ್ರಾಯೀಮ್ ಕುಲದವರ ಮತ್ತು ಮನಸ್ಸೆ ಕುಲದವರ ಮಧ್ಯದಲ್ಲಿ ಪ್ರತ್ಯೇಕವಾದ ಕೆಲವು ಪಟ್ಟಣಗಳು ಅವುಗಳಿಗೆ ಸೇರಿದ ಗ್ರಾಮಗಳು ದೊರಕಿದವು.
Kannada BSI Bible 2016
ಎಫ್ರಾಯಾಮನ ಮಕ್ಕಳಿಗೆ ಕೊಡಲ್ಪಟ್ಟ ಎಲ್ಲಾ ಪಟ್ಟಣಗಳೂ ಅವುಗಳ ಗ್ರಾಮಗಳೂ ಮನಸ್ಸೆಯ ಮಕ್ಕಳ ಬಾಧ್ಯತೆಯ ಮಧ್ಯೆ ಪ್ರತ್ಯೇಕವಾಗಿ ಕೊಡಲ್ಪಟ್ಟವು.ಗೆಜೆರಿನಲ್ಲಿ ವಾಸ ವಾಗಿದ್ದ ಕಾನಾನ್ಯರನ್ನು ಅವರು ಹೊರಡಿಸಿ ಬಿಡದೆ ಹೋದದ್ದರಿಂದ ಕಾನಾನ್ಯರು ಈ ವರೆಗೂ ಅವರಲ್ಲಿ ವಾಸವಾಗಿದ್ದು ಕಪ್ಪಕೊಡುವ ಸೇವಕರಾಗಿದ್ದಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ಎಫ್ರಾಯೀಮ್ ಕುಲದವರಿಗೆ ಮನಸ್ಸೆಕುಲದವರ ಮಧ್ಯದಲ್ಲಿ ಪ್ರತ್ಯೇಕವಾದ ಕೆಲವು ಪಟ್ಟಣಗಳೂ ಅವುಗಳ ಗ್ರಾಮಗಳೂ ದೊರಕಿದವು.
Kannada Bible (KNCL) BSI 2016
ಇದಲ್ಲದೆ, ಎಫ್ರಯಿಮ್ ಕುಲದವರಿಗೆ ಮನಸ್ಸೆ ಕುಲದವರ ಮಧ್ಯೆ ಪ್ರತ್ಯೇಕವಾದ ಕೆಲವು ನಗರಗಳೂ ಅವಕ್ಕೆ ಸೇರಿದ ಗ್ರಾಮಗಳೂ ದೊರಕಿದವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ಎಫ್ರಾಯೀಮ್ ಹಾಗೂ ಮನಸ್ಸೆ ಗೋತ್ರದವರ ಮಧ್ಯೆ ಕೊಡಲಾದ ಎಲ್ಲಾ ಪಟ್ಟಣಗಳೂ ಅವುಗಳ ಗ್ರಾಮಗಳೂ ಪ್ರತ್ಯೇಕವಾಗಿ ಕೊಡಲಾಗಿತ್ತು.