Joshua 17:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದಕ್ಷಿಣದ ಭೂಮಿ ಎಫ್ರಾಯೀಮ್ ಜನರಿಗೆ ಸೇರಿದೆ. ಉತ್ತರದ ಭೂಮಿ ಮನಸ್ಸೆಯ ಜನರಿಗೆ ಸೇರಿದೆ. ಮೆಡಿಟರೆನಿಯನ್ ಸಮುದ್ರವು ಅದರ ಪಶ್ಚಿಮದ ಗಡಿಯಾಗಿತ್ತು. ಅದರ ಸೀಮೆಯು ಉತ್ತರದಲ್ಲಿ ಆಶೇರ್ ಕುಲದವರ ಪ್ರಾಂತ್ಯವನ್ನೂ ಪೂರ್ವದಲ್ಲಿ ಇಸ್ಸಾಕಾರ್ ಕುಲದವರ ನಾಡನ್ನೂ ಮುಟ್ಟುತ್ತದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಹಳ್ಳದ ದಕ್ಷಿಣ ತೀರವು ಎಫ್ರಾಯೀಮ್ಯರದು; ಉತ್ತರ ತೀರವು ಮನಸ್ಸೆಯವರದು. ಸಮುದ್ರವೇ ಇವರ ಪಶ್ಚಿಮದ ಮೇರೆಯು. ಉತ್ತರಕ್ಕೆ ಆಶೇರ್ ಕುಲದವರ ಪ್ರಾಂತ್ಯವೂ ಪೂರ್ವಕ್ಕೆ ಇಸ್ಸಾಕಾರ್ ಕುಲದವರ ದೇಶವೂ ಇರುತ್ತದೆ.
Kannada BSI Bible 2016
ನದಿಯ ದಕ್ಷಿಣ ಸೀಮೆ ಎಫ್ರಾಯಾಮ ನದು; ಉತ್ತರ ಸೀಮೆಯು ಮನಸ್ಸೆಯದು, ಸಮುದ್ರವು ಅದರ ಮೇರೆಯಾಗಿರುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹಳ್ಳದ ದಕ್ಷಿಣ ತೀರವು ಎಫ್ರಾಯೀಮ್ಯರದು; ಉತ್ತರ ತೀರವು ಮನಸ್ಸೆಯವರದು. ಮಹಾಸಾಗರವೇ ಇವರ ಪಶ್ಚಿಮದ ಮೇರೆ. ಉತ್ತರಕ್ಕೆ ಆಶೇರ್ ಕುಲದವರ ಪ್ರಾಂತವೂ ಪೂರ್ವಕ್ಕೆ ಇಸ್ಸಾಕಾರ್ ಕುಲದವರ ದೇಶವೂ ಇರುತ್ತವೆ.
Kannada Bible (KNCL) BSI 2016
ಆ ಹಳ್ಳದ ದಕ್ಷಿಣ ತೀರ ಎಫ್ರಯಿಮ್ಯರದು; ಉತ್ತರ ತೀರ ಮನಸ್ಸೆಯವರದು. ಸಮುದ್ರವೇ ಇವರ ಪಶ್ಚಿಮದ ಎಲ್ಲೆ. ಉತ್ತರಕ್ಕೆ ಆಶೇರ ಕುಲದವರ ಪ್ರಾಂತ್ಯವೂ ಪೂರ್ವಕ್ಕೆ ಇಸ್ಸಾಕಾರ್ ಕುಲದವರ ನಾಡೂ ಇರುತ್ತವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನದಿಯ ದಕ್ಷಿಣ ಸೀಮೆ ಎಫ್ರಾಯೀಮನದು; ಉತ್ತರ ಸೀಮೆ ಮನಸ್ಸೆಯದು, ಮೆಡಿಟೆರೆನಿಯನ್ ಸಮುದ್ರವು ಅದರ ಮೇರೆಯಾಗಿರುವುದು. ಉತ್ತರಕ್ಕೆ ಇರುವ ಆಶೇರ್ ಗೋತ್ರದವರ ಪ್ರಾಂತವೂ ಪೂರ್ವಕ್ಕೆ ಇರುವ ಇಸ್ಸಾಕಾರ್ ಗೋತ್ರವೂ ಇರುವುದು.