Joshua 17:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮನಸ್ಸೆ ಕುಲದವರು ಇಸ್ಸಾಕಾರ್, ಆಶೇರ್ ಪ್ರಾಂತಗಳಲ್ಲಿಯೂ ಕೆಲವು ಊರುಗಳನ್ನು ಹೊಂದಿದ್ದರು. ಬೇತ್‌ಷೆಯಾನ್, ಇಬ್ಲೆಯಾಮ್ ಮತ್ತು ಅವುಗಳ ಸುತ್ತಮುತ್ತಲಿನ ಸಣ್ಣ ಊರುಗಳು ಮನಸ್ಸೆಯ ಜನರ ಅಧೀನದಲ್ಲಿದ್ದವು. ಮನಸ್ಸೆಯ ಜನರು ದೋರ್, ಎಂದೋರ್, ತಾನಕ್, ಮೆಗಿದ್ದೋ ಮತ್ತು ಆ ಪಟ್ಟಣಗಳ ಸುತ್ತಮುತ್ತಲಿನ ಹಳ್ಳಿಗಳಲ್ಲಿಯೂ ವಾಸವಾಗಿದ್ದರು. ಅವರು ನಾಫೊತ್‌ನ ಮೂರು ಊರುಗಳಲ್ಲಿಯೂ ಇದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ ಮನಸ್ಸೆಯವರಿಗೆ ಇಸ್ಸಾಕಾರ್, ಆಶೇರ್ ಎಂಬುವವರ ಪ್ರಾಂತ್ಯಗಳಲ್ಲಿ ಬೇತಷೆಯಾನ್, ಇಬ್ಲೆಯಾಮ, ದೋರ್ ಎಂಬ ಪಟ್ಟಣಗಳೂ ಅವುಗಳ ಗ್ರಾಮಗಳೂ ದುರ್ಗತ್ರಯವಾದ ಎಂದೋರ, ತಾನಾಕ್, ಮೆಗಿದ್ದೋ ಎಂಬ ಪಟ್ಟಣಗಳೂ ಅವುಗಳಿಗೆ ಸೇರಿದ ಊರುಗಳು ಸಿಕ್ಕಿದವು.
Kannada BSI Bible 2016
ಉತ್ತರಕ್ಕೆ ಇರುವ ಆಶೇರಿನಿಂದ ಪೂರ್ವಕ್ಕೆ ಇರುವ ಇಸ್ಸಾಕಾರನ ವರೆಗೆ ಒಟ್ಟಿಗೆ ಕೂಡಿಕೊಳ್ಳುವದು. ಇಸ್ಸಾಕಾರನ ಮಧ್ಯದಲ್ಲಿಯೂ ಆಶೇರನ ಮಧ್ಯದ ಲ್ಲಿಯೂ ಇರುವ ಮೂರು ಸೀಮೆಗಳಾದ ಬೇತ್‌ಷೆ ಯಾನ್ ಇಬ್ಲೆಯಾಮ್ ದೋರ್ ಎಂದೋರ್ ತಾನಕ್ ಮೆಗಿದ್ದೋನ್ ಅವುಗಳ ಗ್ರಾಮಗಳೂ ಇವು ಮನಸ್ಸೆ ಯವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ಮನಸ್ಸೆಯವರಿಗೆ ಇಸ್ಸಾಕಾರ್, ಆಶೇರ್ ಎಂಬವರ ಪ್ರಾಂತಗಳಲ್ಲಿ ಬೇತ್‍ಷೆಯಾನ್, ಇಬ್ಲೆಯಾಮ್, ದೋರ್ ಎಂಬ ಪಟ್ಟಣಗಳೂ ಅವುಗಳ ಗ್ರಾಮಗಳೂ ದುರ್ಗತ್ರಯವಾದ ಎಂದೋರ್, ತಾನಕ್, ಮೆಗಿದ್ದೋ ಎಂಬ ಪಟ್ಟಣಗಳೂ ಅವುಗಳಿಗೆ ಸೇರಿದ ಊರುಗಳೂ ಸಿಕ್ಕಿದವು.
Kannada Bible (KNCL) BSI 2016
ಇದಲ್ಲದೆ ಮನಸ್ಸೆಯವರಿಗೆ ಇಸ್ಸಾಕಾರ್, ಆಶೇರ್ ಎಂಬವರ ಪ್ರಾಂತ್ಯಗಳಲ್ಲಿ ಬೇತ್ ಷೆಯಾನ್, ಇಬ್ಲೆಯಾಮ್, ದೋರ್ ಎಂಬ ನಗರಗಳೂ ಅವುಗಳ ಗ್ರಾಮಗಳೂ ದುರ್ಗತ್ರಯವಾದ ಎಂದೋರ್, ತಾನಕ್, ಮೆಗಿದ್ದೋ ಎಂಬ ನಗರಗಳೂ ಅವುಗಳಿಗೆ ಸೇರಿದ ಊರುಗಳೂ ಸಿಕ್ಕಿದವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಸ್ಸಾಕಾರನ ಮಧ್ಯದಲ್ಲಿಯೂ ಆಶೇರನ ಮಧ್ಯದಲ್ಲಿಯೂ ಇರುವ ಸೀಮೆಗಳಾದ ಬೇತ್ ಷೆಯಾನ, ಅದರ ಗ್ರಾಮಗಳೂ ಇಬ್ಲೆಯಾಮ್ ಅದರ ಗ್ರಾಮಗಳೂ ದೋರ್ ಎಂಬ ಪಟ್ಟಣಗಳೂ ಅವುಗಳ ಗ್ರಾಮಗಳೂ ಎಂದೋರ್, ತಾನಕ್, ಮೆಗಿದ್ದೋ ಎಂಬ ಪಟ್ಟಣಗಳೂ ಅವುಗಳ ಗ್ರಾಮಗಳೂ ಮನಸ್ಸೆಗೆ ಸೇರಿದವು. ಮೂರನೆಯ ಊರು ನಾಫೋತ್ ಆಗಿರುತ್ತದೆ.