Joshua 17:15 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋಶುವನು, “ನಿಮ್ಮಲ್ಲಿ ಬಹಳ ಜನರಿದ್ದರೆ ಬೆಟ್ಟಪ್ರದೇಶಕ್ಕೆ ಹೋಗಿ ಆ ಭೂಮಿಯನ್ನು ತೆಗೆದುಕೊಳ್ಳಿರಿ. ಆ ಭೂಮಿಯು ಈಗ ಪೆರಿಜ್ಜೀಯರ ಮತ್ತು ರೆಫಾಯರ ಸ್ವತ್ತಾಗಿದೆ. ನಿಮಗೆ ಕೊಟ್ಟಿರುವ ಎಫ್ರಾಯೀಮ್ ಬೆಟ್ಟಪ್ರದೇಶವು ಚಿಕ್ಕದೆನಿಸಿದರೆ ಹೋಗಿ ಆ ಭೂಮಿಯನ್ನು ತೆಗೆದುಕೊಳ್ಳಿರಿ” ಎಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋಶುವನು ಅವರಿಗೆ, “ಮಹಾಜನಾಂಗವಾದ ನಿಮಗೆ ಎಫ್ರಾಯೀಮ್ ಬೆಟ್ಟದ ಸೀಮೆ ಸಾಲದಿದ್ದರೆ ಪೆರಿಜ್ಜೀಯರ ಮತ್ತು ರೆಫಾಯರ ಸೀಮೆಗಳಿಗೆ ಹೋಗಿ ಅಲ್ಲಿನ ಕಾಡು ಕಡಿದು ಸ್ಥಳಮಾಡಿಕೊಳ್ಳಿ” ಎಂದನು.
Kannada BSI Bible 2016
ಅದಕ್ಕೆ ಯೆಹೋಶುವನು ಪ್ರತ್ಯುತ್ತರವಾಗಿ ಅವರಿಗೆ--ನೀನು ಮಹಾಜನಾಂಗವಾಗಿದ್ದು ನಿನಗೆ ಎಫ್ರಾಯಾಮಿನ ಪರ್ವತವು ಇಕ್ಕಟ್ಟಾಗಿದರೆ ನೀನು ಪೆರಿಜ್ಜೀಯರ ಮತ್ತು ರೆಫಾಯರ ದೇಶದಲ್ಲಿರುವ ಅಡವಿಗೆ ಹೋಗಿ ಅದನ್ನು ಕಡಿದು ನಿನಗೋಸ್ಕರ ಸ್ಥಳಮಾಡಿಕೋ, ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋಶುವನು ಅವರಿಗೆ - ಮಹಾಜನಾಂಗವಾದ ನಿಮಗೆ ಎಫ್ರಾಯೀಮ್ ಬೆಟ್ಟದ ಸೀಮೆ ಸಾಲದಿದ್ದರೆ ಪೆರಿಜ್ಜೀಯರ ಮತ್ತು ರೆಫಾಯರ ಸೀಮೆಗಳಿಗೆ ಹೋಗಿ ಅಲ್ಲಿನ ಕಾಡು ಕಡಿದು ಸ್ಥಳಮಾಡಿಕೊಳ್ಳಿರಿ ಅಂದನು.
Kannada Bible (KNCL) BSI 2016
ಅದಕ್ಕೆ ಯೆಹೋಶುವನು, “ಮಹಾಜನಾಂಗವಾದ ನಿಮಗೆ ಎಫ್ರಯಿಮ್ ಮಲೆನಾಡು ಸಾಲದಿದ್ದರೆ ಪೆರಿಜ್ಜೀಯರ ಮತ್ತು ರೆಫಾಯರ ನಾಡುಗಳಿಗೆ ಹೋಗಿ ಅಲ್ಲಿನ ಕಾಡು ಕಡಿದು ಸ್ಥಳ ಮಾಡಿಕೊಳ್ಳಿ,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದಕ್ಕೆ ಯೆಹೋಶುವನು ಉತ್ತರವಾಗಿ ಅವರಿಗೆ, “ನೀವು ಹೆಚ್ಚು ಜನರಾಗಿದ್ದರೆ ಮತ್ತು ನಿಮಗೆ ಎಫ್ರಾಯೀಮ್ ಪರ್ವತವು ಸಾಲದಿದ್ದರೆ, ನೀವು ಪೆರಿಜೀಯರ ಮತ್ತು ರೆಫಾಯರ ನಾಡುಗಳಿಗೆ ಹೋಗಿ ಅಲ್ಲಿನ ಕಾಡನ್ನು ಕಡಿದು ನಿಮಗೆ ಸ್ಥಳಮಾಡಿಕೊಳ್ಳಿರಿ,” ಎಂದನು.