Joshua 17:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮನಸ್ಸೆ ಕುಲದ ಅಬೀಯೆಜೆರ್, ಹೇಲೆಕ್, ಅಸ್ರೀಯೇಲ್, ಶೆಕೆಮ್, ಹೇಫೇರ್, ಶೆಮೀದಾ ಎಂಬವರ ವಂಶದವರಿಗೂ ಭೂಮಿಯನ್ನು ಕೊಡಲಾಯಿತು. ಇವರೆಲ್ಲರು ಯೋಸೇಫನ ಮಗನಾದ ಮನಸ್ಸೆಯ ಉಳಿದ ಗಂಡುಮಕ್ಕಳು. ಈ ಜನರ ವಂಶದವರೂ ತಮ್ಮ ಪಾಲಿನ ಭೂಮಿಯನ್ನು ಪಡೆದುಕೊಂಡರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೋಸೇಫನ ಮಗನಾಗಿರುವ ಮನಸ್ಸೆಯ ಉಳಿದ ಗಂಡು ಮಕ್ಕಳಾದ ಅಬೀಯೆಜೆರ್, ಹೇಲೆಕ್, ಅಸ್ರೀಯೇಲ್, ಶೆಕೆಮ್, ಹೇಫೆರ್, ಶೆಮೀದಾ ಎಂಬುವವರ ವಂಶದವರಿಗೆ ಯೊರ್ದನಿನ ಈಚೆಯಲ್ಲಿ ಸ್ವತ್ತು ಸಿಕ್ಕಿತು.
Kannada BSI Bible 2016
ಮನಸ್ಸೆಯ ಉಳಿದ ಮಕ್ಕಳಾದ ಅಬೀಯೇಜೆರಿನ ಮಕ್ಕಳಿಗೂ ಹೇಲೆಕನ ಮಕ್ಕಳಿಗೂ ಅಸ್ರೀಯೇಲನ ಮಕ್ಕಳಿಗೂ ಶೆಕೆಮನ ಮಕ್ಕಳಿಗೂ ಹೇಫೆರನ ಮಕ್ಕಳಿಗೂ ಶೆವಿಾದನನ ಮಕ್ಕಳಿಗೂ ಅವರ ಕುಟುಂಬಗಳಿಗೆ ತಕ್ಕ ಬಾಧ್ಯತೆ ಉಂಟಾಯಿತು. ಇವರು ತಮ್ಮ ಕುಟುಂಬಗಳ ಪ್ರಕಾರ ಯೋಸೇಫನ ಮಗ ನಾದ ಮನಸ್ಸೆಯ ಗಂಡು ಮಕ್ಕಳಾಗಿದ್ದವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೋಸೇಫನ ಮಗನಾಗಿರುವ ಮನಸ್ಸೆಯ ಉಳಿದ ಗಂಡು ಮಕ್ಕಳಾದ ಅಬೀಯೆಜೆರ್, ಹೇಲೆಕ್, ಅಸ್ರೀಯೇಲ್, ಶೆಕೆಮ್, ಹೇಫೆರ್, ಶೆಮೀದಾ ಎಂಬವರ ವಂಶದವರಿಗೆ [ಯೊರ್ದನಿನ ಈಚೆಯಲ್ಲಿ] ಸ್ವಾಸ್ತ್ಯವು ಸಿಕ್ಕಿತು.
Kannada Bible (KNCL) BSI 2016
ಜೋಸೆಫನ ಮಗ ಮನಸ್ಸೆಯ ಉಳಿದ ಗಂಡು ಮಕ್ಕಳಾದ ಅಬೀಯೆಜೆರ್, ಹೇಲೆಕ್, ಅಸ್ರೀಯೇಲ್, ಶೆಕೆಮ್, ಹೇಫೆರ್, ಶಮೀದಾ, ಎಂಬವರ ವಂಶದವರಿಗೆ ಜೋರ್ಡನಿನ ಈಚೆಕಡೆ ಪಾಲು ಸಿಕ್ಕಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮನಸ್ಸೆಯ ಉಳಿದವರಿಗೆ ಅಬೀಯೆಜೆರನ ಮಕ್ಕಳಿಗೂ ಹೇಲೆಕ್‌ನ ಮಕ್ಕಳಿಗೂ ಅಸ್ರೀಯೇಲನ ಮಕ್ಕಳಿಗೂ ಶೆಕೆಮ್ ಮಕ್ಕಳಿಗೂ ಹೇಫೆರನ ಮಕ್ಕಳಿಗೂ ಶೆಮೀದಾನನ ಮಕ್ಕಳಿಗೂ ಅವರ ಕುಟುಂಬಗಳಿಗೆ ತಕ್ಕ ಸೊತ್ತು ದೊರೆಯಿತು. ಇವರು ತಮ್ಮ ಕುಟುಂಬಗಳ ಪ್ರಕಾರ ಯೋಸೇಫನ ಮಗನಾದ ಮನಸ್ಸೆಯ ಗಂಡು ಮಕ್ಕಳಾಗಿದ್ದವರು.