Joshua 17:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಚಲ್ಪಹಾದನು ಹೇಫೆರನ ಮಗನು, ಹೇಫೆರನು ಗಿಲ್ಯಾದನ ಮಗನು, ಗಿಲ್ಯಾದನು ಮಾಕೀರನ ಮಗನು. ಮಾಕೀರನು ಮನಸ್ಸೆಯ ಮಗನು. ಚಲ್ಪಹಾದನಿಗೆ ಗಂಡುಮಕ್ಕಳಿರಲಿಲ್ಲ. ಆದರೆ ಅವನಿಗೆ ಐದು ಜನ ಹೆಣ್ಣುಮಕ್ಕಳಿದ್ದರು. ಅವರ ಹೆಸರುಗಳು: ಮಹ್ಲಾ, ನೋಹಾ, ಹೊಗ್ಲಾ, ಮಿಲ್ಕಾ ಮತ್ತು ತಿರ್ಚಾ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮನಸ್ಸೆಗೆ ಹುಟ್ಟಿದ ಮಾಕೀರನ ಮರಿಮಗನೂ ಗಿಲ್ಯಾದನ ಮೊಮ್ಮಗನೂ ಹೇಫೆರನ ಮಗನೂ ಆದ ಚಲ್ಪಹಾದನಿಗೆ ಹೆಣ್ಣು ಮಕ್ಕಳ ಹೊರತು ಗಂಡು ಮಕ್ಕಳು ಇರಲಿಲ್ಲ. ಮಹ್ಲಾ, ನೋವಾ, ಹೊಗ್ಲಾ, ಮಿಲ್ಕಾ, ತಿರ್ಚಾ ಎಂಬುವವರು ಅವನ ಹೆಣ್ಣು ಮಕ್ಕಳು.
Kannada BSI Bible 2016
ಆದರೆ ಮನಸ್ಸೆಗೆ ಹುಟ್ಟಿದ ಮಾಕೀರನ ಮರಿಮಗನೂ ಗಿಲ್ಯಾ ದನ ಮೊಮ್ಮಗನೂ ಹೇಫೆರನ ಮಗನಾದ ಚಲ್ಪಹಾದನಿಗೆ ಕುಮಾರರಿಲ್ಲ; ಆದರೆ ಮಹ್ಲಾ, ನೋವಾ, ಹೋಗ್ಲಾ, ಮಿಲ್ಕಾ, ತಿರ್ಚಾ ಎಂಬ ಹೆಸರುಳ್ಳ ಕುಮಾರ್ತೆ ಯರಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮನಸ್ಸೆಗೆ ಹುಟ್ಟಿದ ಮಾಕೀರನ ಮರಿಮಗನೂ ಗಿಲ್ಯಾದನ ಮೊಮ್ಮಗನೂ ಹೇಫೆರನ ಮಗನೂ ಆದ ಚಲ್ಪಹಾದನಿಗೆ ಹೆಣ್ಣುಮಕ್ಕಳು ಹುಟ್ಟಿದರೇ ಹೊರತು ಗಂಡು ಮಕ್ಕಳು ಹುಟ್ಟಲಿಲ್ಲ. ಮಹ್ಲಾ, ನೋವಾ, ಹೊಗ್ಲಾ, ವಿುಲ್ಕಾ, ತಿರ್ಚಾ ಎಂಬವರು ಅವನ ಹೆಣ್ಣುಮಕ್ಕಳು.
Kannada Bible (KNCL) BSI 2016
ಮನಸ್ಸೆಗೆ ಹುಟ್ಟಿದ ಮಾಕೀರನ ಮರಿಮಗನೂ ಗಿಲ್ಯಾದನ ಮೊಮ್ಮಗನೂ ಹೇಫೆರನ ಮಗನೂ ಆದ ಚಲ್ಪಹಾದನಿಗೆ ಹೆಣ್ಣು ಮಕ್ಕಳು ಹುಟ್ಟಿದರೇ ಹೊರತು ಗಂಡು ಮಕ್ಕಳು ಆಗಲಿಲ್ಲ. ಮಹ್ಲಾ, ನೋವಾ, ಹೊಗ್ಲಾ, ಮಿಲ್ಕಾ, ತಿರ್ಚಾ ಎಂಬವರು ಅವನ ಹೆಣ್ಣುಮಕ್ಕಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಮನಸ್ಸೆಗೆ ಹುಟ್ಟಿದ ಮಾಕೀರನ ಮರಿಮಗನೂ, ಗಿಲ್ಯಾದನ ಮೊಮ್ಮಗನೂ, ಹೇಫೆರನ ಮಗನೂ ಆದ ಚಲ್ಪಹಾದನಿಗೆ ಪುತ್ರರಿರಲಿಲ್ಲ. ಆದರೆ ಮಹ್ಲಾ, ನೋವಾ, ಹೊಗ್ಲಾ, ಮಿಲ್ಕಾ, ತಿರ್ಚಾ ಎಂಬ ಹೆಸರುಳ್ಳ ಪುತ್ರಿಯರು ಇದ್ದರು.