Joshua 17:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ಹೆಣ್ಣುಮಕ್ಕಳು ಯಾಜಕನಾದ ಎಲ್ಲಾಜಾರ್, ನೂನನ ಮಗನಾದ ಯೆಹೋಶುವ ಮತ್ತು ಇಸ್ರೇಲರ ನಾಯಕರ ಹತ್ತಿರ ಹೋಗಿ, “ಗಂಡುಮಕ್ಕಳಿಗೆ ಕೊಟ್ಟ ಹಾಗೆ ನಮಗೂ ಭೂಮಿಯನ್ನು ಕೊಡಬೇಕೆಂದು ಯೆಹೋವನು ಮೋಶೆಗೆ ಹೇಳಿದ್ದಾನೆ” ಅಂದರು. ಎಲ್ಲಾಜಾರನು ಯೆಹೋವನ ಆಜ್ಞೆಯನ್ನು ಪಾಲಿಸಿ ಆ ಹೆಣ್ಣುಮಕ್ಕಳಿಗೆ ಸ್ವಲ್ಪ ಭೂಮಿಯನ್ನು ಕೊಟ್ಟನು. ಹೀಗೆ ಈ ಹೆಣ್ಣಮಕ್ಕಳು ಗಂಡುಮಕ್ಕಳಂತೆಯೇ ಭೂಮಿಯನ್ನು ಪಡೆದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇವರು ಮಹಾಯಾಜಕನಾದ ಎಲ್ಲಾಜಾರ, ನೂನನ ಮಗನಾದ ಯೆಹೋಶುವ, ಹಾಗೂ ಕುಲಾಧಿಪತಿಗಳ ಬಳಿಗೆ ಬಂದು, “ನಮ್ಮ ಅಣ್ಣತಮ್ಮಂದಿರೊಡನೆ ನಮಗೂ ಪಾಲುಕೊಡಬೇಕೆಂದು ಯೆಹೋವನು ಮೋಶೆಗೆ ಆಜ್ಞಾಪಿಸಿದ್ದನಲ್ಲಾ?” ಎಂದು ಹೇಳಲು ಯೆಹೋಶುವನು ಯೆಹೋವನ ಅಪ್ಪಣೆಯಂತೆ ಅವರಿಗೆ ಅವರ ತಂದೆಯ ಅಣ್ಣತಮ್ಮಂದಿರ ಜೊತೆಗೆ ಸ್ವತ್ತನ್ನು ಕೊಟ್ಟನು.
Kannada BSI Bible 2016
ಇವರು ಯಾಜಕನಾದ ಎಲ್ಲಾಜಾರನ ಬಳಿಗೂ ನೂನನ ಮಗನಾದ ಯೆಹೋಶುವನ ಬಳಿಗೂ ಪ್ರಧಾನರುಗಳ ಬಳಿಗೂ ಬಂದು ಅವರಿಗೆನಮ್ಮ ಸಹೋದರರಲ್ಲಿ ನಮಗೆ ಬಾಧ್ಯತೆಯನ್ನು ಕೊಡು ವಂತೆ ಕರ್ತನು ಮೋಶೆಗೆ ಆಜ್ಞಾಪಿಸಿದನು ಅಂದರು. ಆದದರಿಂದ ಅವರ ತಂದೆಗಳ ಸಹೋದರರ ಮಧ್ಯ ದಲ್ಲಿ ಅವರಿಗೆ ಕರ್ತನ ವಾಕ್ಯದ ಹಾಗೆಯೇ ಬಾಧ್ಯತೆ ಯನ್ನು ಕೊಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇವರು ಮಹಾಯಾಜಕನಾದ ಎಲ್ಲಾಜಾರ್, ನೂನನ ಮಗನಾದ ಯೆಹೋಶುವ, ಕುಲಾಧಿಪತಿಗಳು ಇವರ ಬಳಿಗೆ ಬಂದು - ನಮ್ಮ ಅಣ್ಣತಮ್ಮಂದಿರ ಮಧ್ಯದಲ್ಲಿ ನಮಗೆ ಪಾಲುಕೊಡಬೇಕೆಂದು ಯೆಹೋವನು ಮೋಶೆಗೆ ಆಜ್ಞಾಪಿಸಿದನಲ್ಲಾ ಎಂದು ಹೇಳಲು ಯೆಹೋಶುವನು ಯೆಹೋವನ ಅಪ್ಪಣೆಯಂತೆ ಅವರಿಗೆ ಅವರ ತಂದೆಯ ಅಣ್ಣತಮ್ಮಂದಿರ ಮಧ್ಯದಲ್ಲಿ ಸ್ವಾಸ್ತ್ಯವನ್ನು ಕೊಟ್ಟನು.
Kannada Bible (KNCL) BSI 2016
ಇವರು ಮಹಾಯಾಜಕನಾದ ಎಲ್ಲಾಜಾರ್, ನೂನನ ಮಗ ಯೆಹೋಶುವ ಹಾಗೂ ಕುಲಾಧಿಪತಿಗಳ ಬಳಿಗೆ ಬಂದು, “ನಮ್ಮ ಅಣ್ಣತಮ್ಮಂದಿರೊಡನೆ ನಮಗೂ ಪಾಲುಕೊಡಬೇಕೆಂದು ಸರ್ವೇಶ್ವರ ಮೋಶೆಗೆ ಆಜ್ಞಾಪಿಸಿದ್ದಾರಲ್ಲವೆ?” ಎಂದು ಹೇಳಿದರು. ಯೆಹೋಶುವನು ಸರ್ವೇಶ್ವರನ ಅಪ್ಪಣೆಯಂತೆ ಅವರಿಗೆ ಅವರ ತಂದೆಯ ಅಣ್ಣತಮ್ಮಂದಿರ ಜೊತೆಗೆ ಸೊತ್ತನ್ನು ಪಾಲಾಗಿಕೊಟ್ಟನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇವರು ಯಾಜಕನಾದ ಎಲಿಯಾಜರನ ಬಳಿಗೂ ನೂನನ ಮಗ ಯೆಹೋಶುವನ ಬಳಿಗೂ ಪ್ರಧಾನರುಗಳ ಬಳಿಗೂ ಬಂದು ಅವರಿಗೆ, “ನಮ್ಮ ಸಹೋದರರಲ್ಲಿ ನಮಗೂ ಸೊತ್ತನ್ನು ಕೊಡುವಂತೆ ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ್ದರು,” ಎಂದರು. ಆದ್ದರಿಂದ ಅವರ ತಂದೆಗಳ ಸಹೋದರರ ಜೊತೆಗೆ ಅವರಿಗೂ ಯೆಹೋವ ದೇವರ ವಾಕ್ಯದ ಪ್ರಕಾರ ಸೊತ್ತನ್ನು ಕೊಟ್ಟನು.