Joshua 17:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮನಸ್ಸೆ ಕುಲದವರು ಜೋರ್ಡನ್ ನದಿಯ ಪಶ್ಚಿಮದಲ್ಲಿ ಹತ್ತು ಭೂಭಾಗಗಳನ್ನು ಮತ್ತು ಆ ನದಿಯ ಮತ್ತೊಂದು ದಿಕ್ಕಿನಲ್ಲಿ ಗಿಲ್ಯಾದ್ ಮತ್ತು ಬಾಷಾನ್ ಎಂಬ ಮತ್ತೆರಡು ಭೂಭಾಗಗಳನ್ನು ಪಡೆದುಕೊಂಡರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮನಸ್ಸೆ ಕುಲದ ಹೆಣ್ಣುಮಕ್ಕಳಿಗೆ ಗಂಡು ಮಕ್ಕಳ ಸಹಿತವಾಗಿ ಸ್ವಾಸ್ತ್ಯ ದೊರಕಿದ್ದರಿಂದ ಮನಸ್ಸೆಯವರಿಗೆ ಯೊರ್ದನಿನ ಆಚೆಯಲ್ಲಿ ಬಾಷಾನ್ ಮತ್ತು ಗಿಲ್ಯಾದ್ ಪ್ರಾಂತ್ಯಗಳ ಜೊತೆಗೆ ಈಚೆಯಲ್ಲಿಯೂ ಹತ್ತು ಪಾಲು ಸಿಕ್ಕಿದವು.
Kannada BSI Bible 2016
ಯೊರ್ದನಿಗೆ ಆಚೆಯಲ್ಲಿರುವ ಗಿಲ್ಯಾದೂ ಬಾಷಾನೂ ಎಂಬ ದೇಶಗಳ ಹೊರತು ಮನಸ್ಸೆಗೆ ಚೀಟಿನಲ್ಲಿ ಬಿದ್ದ ದೇಶ ಹತ್ತು ಪಾಲು ಸಿಕ್ಕಿದವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮನಸ್ಸೆಕುಲದ ಹೆಣ್ಣು ಮಕ್ಕಳಿಗೆ ಗಂಡು ಮಕ್ಕಳ ಸಂಗಡ ಸ್ವಾಸ್ತ್ಯದೊರಕಿದ್ದರಿಂದ ಮನಸ್ಸೆಯವರಿಗೆ ಯೊರ್ದನಿನ ಆಚೆಯಿದ್ದ ಬಾಷಾನ್ ಗಿಲ್ಯಾದ್ ಪ್ರಾಂತಗಳ ಹೊರತು ಈಚೆಯಲ್ಲಿಯೂ ಹತ್ತು ಪಾಲು ಸಿಕ್ಕಿದವು.
Kannada Bible (KNCL) BSI 2016
ಮನಸ್ಸೆ ಕುಲದ ಹೆಣ್ಣುಮಕ್ಕಳಿಗೆ ಗಂಡುಮಕ್ಕಳ ಸಮೇತ ಸೊತ್ತು ದೊರಕಿದ್ದರಿಂದ ಮನಸ್ಸೆಯವರಿಗೆ ಜೋರ್ಡನಿನ ಆಚೆಯಿದ್ದ ಬಾಷಾನ್ ಮತ್ತು ಗಿಲ್ಯಾದ್ ಪ್ರಾಂತ್ಯಗಳ ಜೊತೆಗೆ ಈಚೆಯಲ್ಲೂ ಹತ್ತುಪಾಲು ಸಿಕ್ಕಿದವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೊರ್ದನ್ ನದಿ ಆಚೆಯಲ್ಲಿರುವ ಗಿಲ್ಯಾದ್, ಬಾಷಾನ್ ಎಂಬ ಪ್ರಾಂತ್ಯಗಳ ಜೊತೆಗೆ ಮನಸ್ಸೆಗೆ ಬಿದ್ದ ಚೀಟಿನಲ್ಲಿ ಈಚೆಯಲ್ಲಿಯೂ ಹತ್ತು ಪಾಲು ಸಿಕ್ಕಿದವು.