Joshua 17:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಎನ್‌ತಪ್ಪೂಹದ ಸುತ್ತಮುತ್ತಲಿನ ಭೂಮಿ ಮನಸ್ಸೆಕುಲದವರ ಸ್ವತ್ತಾಗಿದ್ದರೂ ಆ ಊರು ಮಾತ್ರ ಅವರ ಅಧೀನದಲ್ಲಿರಲಿಲ್ಲ. ಎನ್‌ತಪ್ಪೂಹ ಎಂಬ ಊರು ಮನಸ್ಸೆ ಕುಲದವರ ಪ್ರಾಂತ್ಯದ ಸೀಮೆಯಲ್ಲಿದ್ದರೂ ಅದು ಎಫ್ರಾಯೀಮ್ ಜನರ ಸ್ವಾಸ್ತ್ಯದಲ್ಲಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತಪ್ಪೂಹ ಪಟ್ಟಣಕ್ಕೆ ಸೇರುವ ಭೂಮಿಯು ಮನಸ್ಸೆಯವರದು; ಆದರೆ ಅವರ ಮೇರೆಗೆ ಹೊಂದಿರುವ ತಪ್ಪೂಹ ಪಟ್ಟಣವು ಎಫ್ರಾಯೀಮ್ಯರದು;
Kannada BSI Bible 2016
ತಪ್ಪೂಹ ಭೂಮಿ ಮನಸ್ಸೆಯದಾಗಿತ್ತು. ಆದರೆ ಮನಸ್ಸೆಯ ಮೇರೆಯಲ್ಲಿರುವ ತಪ್ಪೂಹ ಎಫ್ರಾಯಾ ಮನ ಮಕ್ಕಳದ್ದಾಗಿತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ತಪ್ಪೂಹ ಪಟ್ಟಣಕ್ಕೆ ಸೇರುವ ಭೂವಿುಯು ಮನಸ್ಸೆಯವರದು; ಆದರೆ ಅವರ ಮೇರೆಗೆ ಹೊಂದಿರುವ ತಪ್ಪೂಹ ಪಟ್ಟಣವು ಎಫ್ರಾಯೀಮ್ಯರದು.
Kannada Bible (KNCL) BSI 2016
ತಪ್ಪೂಹ ನಗರಕ್ಕೆ ಸೇರುವ ಭೂಮಿ ಮನಸ್ಸೆಯವರದು;ಆದರೆ ಅವರ ಸರಹದ್ದಿನಲ್ಲಿರುವ ತಪ್ಪೂಹ ನಗರ ಎಫ್ರಯಿಮ್ಯರದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತಪ್ಪೂಹದ ಭೂಮಿ ಮನಸ್ಸೆಯದಾಗಿತ್ತು. ಆದರೆ ಮನಸ್ಸೆಯ ಮೇರೆಯಲ್ಲಿರುವ ತಪ್ಪೂಹ ಎಫ್ರಾಯೀಮನ ಮಕ್ಕಳದ್ದಾಗಿತ್ತು.