Joshua 18:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇಸ್ರೇಲರೆಲ್ಲರು ಶೀಲೋವಿನಲ್ಲಿ ಒಟ್ಟಾಗಿ ಸೇರಿದರು. ಆ ಸ್ಥಳದಲ್ಲಿ ಅವರು ದೇವದರ್ಶನ ಗುಡಾರವನ್ನು ನಿಲ್ಲಿಸಿದರು. ಇಸ್ರೇಲರು ಆ ದೇಶವನ್ನು ಸ್ವಾಧೀನ ಮಾಡಿಕೊಂಡಿದ್ದರು. ಅವರು ಆ ದೇಶದ ಎಲ್ಲ ಶತ್ರುಗಳನ್ನು ಸೋಲಿಸಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೇಶವೆಲ್ಲಾ ತಮ್ಮ ವಶವಾದ ಮೇಲೆ ಇಸ್ರಾಯೇಲ್ಯ ಸಮೂಹದ ಎಲ್ಲಾ ಜನರೂ ಶೀಲೋವಿನಲ್ಲಿ ಕೂಡಿ ಬಂದು ದೇವದರ್ಶನದ ಗುಡಾರವನ್ನು ನಿಲ್ಲಿಸಿದರು.
Kannada BSI Bible 2016
ಇಸ್ರಾಯೇಲ್ ಮಕ್ಕಳ ಸಭೆಯೆಲ್ಲಾ ಶೀಲೋವಿನಲ್ಲಿ ಒಟ್ಟುಗೂಡಿ ಅಲ್ಲಿ ಸಭೆಯ ಗುಡಾರವನ್ನು ನಿಲ್ಲಿಸಿದರು. ದೇಶವು ಅವರ ವಶವಾಯಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ದೇಶವೆಲ್ಲಾ ವಶವಾದ ಮೇಲೆ ಇಸ್ರಾಯೇಲ್ ಸಮೂಹದ ಎಲ್ಲಾ ಜನರೂ ಶೀಲೋವಿನಲ್ಲಿ ಕೂಡಿ ಬಂದು ದೇವದರ್ಶನದ ಗುಡಾರವನ್ನು ನಿಲ್ಲಿಸಿದರು.
Kannada Bible (KNCL) BSI 2016
ನಾಡೆಲ್ಲವು ತಮ್ಮ ವಶವಾದ ಮೇಲೆ ಇಸ್ರಯೇಲ್ ಜನಾಂಗವೆಲ್ಲ ಶೀಲೋವಿನಲ್ಲಿ ಕೂಡಿ ದೇವದರ್ಶನದ ಗುಡಾರವನ್ನು ನಿಲ್ಲಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಸ್ರಾಯೇಲರ ಸಮೂಹವೆಲ್ಲಾ ಶೀಲೋವಿನಲ್ಲಿ ಒಟ್ಟು ಕೂಡಿ ಅಲ್ಲಿ ದೇವದರ್ಶನ ಗುಡಾರವನ್ನು ನಿಲ್ಲಿಸಿದರು. ದೇಶವು ಅವರ ವಶವಾಯಿತು.