Joshua 18:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದಕ್ಷಿಣದಲ್ಲಿರುವ ಬೇತೇಲ್ ಎಂಬ ಲೂಜಿಗೆ ಹೋಗುತ್ತದೆ. ಅಲ್ಲಿಂದ ಇಳಿದು ಅಟಾರೋತದ್ದಾರ್‌ಗೆ ಹೋಗುತ್ತದೆ. ಅಟಾರೋತದ್ದಾರ್ ಕೆಳಗಿನ ಬೇತ್‌ಹೋರೋನಿನ ದಕ್ಷಿಣದಲ್ಲಿರುವ ಬೆಟ್ಟದ ಮೇಲೆ ಇದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಲ್ಲಿಂದ ದಕ್ಷಿಣಕ್ಕೆ ತಿರುಗಿಕೊಂಡು ಈಗ ಬೇತೇಲ್ ಎನ್ನಿಸಿಕೊಳ್ಳುವ ಲೂಜ್ ಊರಿರುವ ಬೆಟ್ಟಕ್ಕೆ ಹೋಗುತ್ತದೆ.
Kannada BSI Bible 2016
ಆ ಮೇರೆಯು ಅಲ್ಲಿಂದ ಬೇತೇಲೆಂಬ ಲೂಜಿಗೆ ಹಾದು ಲೂಜಿಗೆ ದಕ್ಷಿಣ ಪಾರ್ಶ್ವದಕಡೆಗೆ ಹೋಗಿ ಅಟಾರೋತದ್ದಾರಿನ ಕೆಳಗಿನ ಬೇತ್‌ಹೋರೋನಿಗೆ ದಕ್ಷಿಣದಲ್ಲಿರುವ ಬೆಟ್ಟಕ್ಕೆ ಹೋಗುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಲ್ಲಿಂದ ದಕ್ಷಿಣಕ್ಕೆ ತಿರುಗಿಕೊಂಡು ಈಗ ಬೇತೇಲ್ ಅನ್ನಿಸಿಕೊಳ್ಳುವ ಲೂಜ್ ಊರಿರುವ ಬೆಟ್ಟಕ್ಕೆ ಹೋಗಿ ಅಲ್ಲಿಂದ ಇಳಿದು ಅಟಾರೋತದ್ದಾರಿನ ಮೇಲೆ ಕೆಳಗಿನ ಬೇತ್‍ಹೋರೋನಿನ ಬಳಿಯಲ್ಲಿರುವ ಬೆಟ್ಟಕ್ಕೆ ಹೋಗುತ್ತದೆ.
Kannada Bible (KNCL) BSI 2016
ಅಲ್ಲಿಂದ ದಕ್ಷಿಣಕ್ಕೆ ತಿರುಗಿಕೊಂಡು ಈಗ ಬೇತೇಲ್ ಎನಿಸಿಕೊಳ್ಳುವ ಲೂಜ್ ಊರಿರುವ ಬೆಟ್ಟಕ್ಕೆ ಹೋಗಿ ಅಲ್ಲಿಂದ ಇಳಿದು ಅಟಾರೋತದ್ದಾರಿನ ಮೇಲೆ ಕೆಳಗಿನ ಬೇತ್ ಹೋರೋನಿನ ಬಳಿಯಲ್ಲಿರುವ ಬೆಟ್ಟಕ್ಕೆ ಹೋಗುತ್ತದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ಮೇರೆಯು ಅಲ್ಲಿಂದ ಬೇತೇಲೆಂಬ ಲೂಜಿಗೆ ಹಾದು, ಲೂಜಿನ ದಕ್ಷಿಣದ ಕಡೆಗೆ ಹೋಗಿ, ಅಟಾರೋತ್ ಅದ್ದಾರಿನ ಕೆಳಗಿನ ಬೇತ್ ಹೋರೋನಿಗೆ ದಕ್ಷಿಣದಲ್ಲಿರುವ ಬೆಟ್ಟಕ್ಕೆ ಹೋಗುವುದು.