Joshua 18:19 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅಲ್ಲಿಂದ ಆ ಮೇರೆಯು ಬೇತ್‌ಹೊಗ್ಲಾವಿನ ಉತ್ತರಭಾಗದಲ್ಲಿ ಮುಂದುವರೆದು ಲವಣಸಮುದ್ರದ ಉತ್ತರ ದಡದಲ್ಲಿ ಮುಕ್ತಾಯಗೊಳ್ಳುತ್ತದೆ. ಜೋರ್ಡನ್ ನದಿಯು ಸಮುದ್ರಕ್ಕೆ ಸೇರುವುದು ಇಲ್ಲಿಯೇ. ಇದು ದಕ್ಷಿಣದಿಕ್ಕಿನ ಸೀಮೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಲ್ಲಿಂದ ಮೇರೆಯು ಬೇತ್ ಹೊಗ್ಲಾ ಎಂಬ ಊರಿನ ಉತ್ತರದಲ್ಲಿರುವ ಗುಡ್ಡದ ಮೇಲೆ ಲವಣಸಮುದ್ರದ ಬಡಗಣ ಮೂಲೆಗೆ ಹೋಗಿ ಯೊರ್ದನ್ ನದಿಯು ಸಮುದ್ರಕ್ಕೆ ಬಂದು ಸೇರುವ ಸ್ಥಳದಲ್ಲಿ ಕೊನೆಗೊಳ್ಳುತ್ತದೆ. ಇದೇ ದಕ್ಷಿಣ ದಿಕ್ಕಿನ ಮೇರೆಯು.
Kannada BSI Bible 2016
ಅಲ್ಲಿಂದ ಆ ಮೇರೆ ಬೇತ್‌ಹೋಗ್ಲಾಕ್ಕೆ ಉತ್ತರ ಕಡೆಯಾಗಿ ಹೊರಟು ಯೊರ್ದನಿನ ಮುಖದ್ವಾರಕ್ಕೆ ಉತ್ತರವಾದ ಉಪ್ಪು ಸಮುದ್ರದ ಉತ್ತರ ಮೂಲೆ ಯಲ್ಲಿ ಮುಗಿಯಿತು. ಅದು ದಕ್ಷಿಣ ಭಾಗದ ಮೇರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಲ್ಲಿಂದ ಮೇರೆಯು ಬೇತ್‍ಹೊಗ್ಲಾ ಎಂಬ ಊರಿನ ಉತ್ತರದಲ್ಲಿರುವ ಗುಡ್ಡದ ಮೇಲೆ ಲವಣಸಮುದ್ರದ ಬಡಗಣ ಮೂಲೆಗೆ ಹೋಗಿ ಯೊರ್ದನ್ ಹೊಳೆಯು ಆ ಸಮುದ್ರಕ್ಕೆ ಕೂಡುವ ಸ್ಥಳದಲ್ಲಿ ಮುಗಿಯುತ್ತದೆ.
Kannada Bible (KNCL) BSI 2016
ಅಲ್ಲಿಂದ ಆ ಎಲ್ಲೆ ಬೇತ್ ಹೊಗ್ಲಾ ಎಂಬ ಊರಿನ ಉತ್ತರದಲ್ಲಿರುವ ಗುಡ್ಡದ ಮೇಲೆ ಲವಣಸಮುದ್ರದ ಉತ್ತರ ಮೂಲೆಗೆ ಹೋಗಿ ಜೋರ್ಡನ್ ನದಿಯು ಆ ಸಮುದ್ರಕ್ಕೆ ಕೂಡುವ ಸ್ಥಳದಲ್ಲಿ ಮುಗಿಯುತ್ತದೆ. ಇದೇ ದಕ್ಷಿಣದಿಕ್ಕಿನ ಸರಹದ್ದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಲ್ಲಿಂದ ಆ ಮೇರೆ ಬೇತ್ ಹೊಗ್ಲಾಕ್ಕೆ ಉತ್ತರ ಕಡೆಯಾಗಿ ಹೊರಟು, ಯೊರ್ದನ್ ನದಿ ಮುಖ ದ್ವಾರಕ್ಕೆ ಉತ್ತರವಾದ ಲವಣ ಸಮುದ್ರ ಎಂಬ ಲವಣ ಸಮುದ್ರದ ಉತ್ತರ ಮೂಲೆಯಲ್ಲಿ ಮುಗಿಯುತ್ತದೆ. ಇದೇ ದಕ್ಷಿಣ ಭಾಗದ ಮೇರೆ.