Joshua 18:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದ್ದರಿಂದ ಯೆಹೋಶುವನು ಇಸ್ರೇಲರಿಗೆ, “ನೀವು ನಿಮ್ಮ ಭೂಮಿಯನ್ನು ಪಡೆದುಕೊಳ್ಳಲು ಅಷ್ಟು ದೀರ್ಘಕಾಲದವರೆಗೆ ಏಕೆ ಕಾಯುತ್ತೀರಿ? ನಿಮ್ಮ ಪೂರ್ವಿಕರ ದೇವರಾದ ಯೆಹೋವನು ಈ ಭೂಮಿಯನ್ನು ನಿಮಗೆ ಕೊಟ್ಟಿದ್ದಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಯೆಹೋಶುವನು ಇಸ್ರಾಯೇಲ್ಯರಿಗೆ “ನಿಮ್ಮ ಪೂರ್ವಿಕರ ದೇವರಾದ ಯೆಹೋವನು ನಿಮಗೆ ಕೊಟ್ಟ ದೇಶವನ್ನು ಸ್ವಾಧೀನಮಾಡಿಕೊಳ್ಳುವುದರಲ್ಲಿ ಇನ್ನೆಷ್ಟು ತಡಮಾಡುತ್ತೀರಿ?
Kannada BSI Bible 2016
ಯೆಹೋಶುವನು ಇಸ್ರಾಯೇಲ್ ಮಕ್ಕಳಿಗೆ--ನಿಮ್ಮ ತಂದೆಗಳ ದೇವರಾದ ಕರ್ತನು ನಿಮಗೆ ಕೊಟ್ಟ ದೇಶವನ್ನು ಸ್ವಾಧೀನಮಾಡಿಕೊಳ್ಳು ವದಕ್ಕೆ ನೀವು ಎಷ್ಟರ ವರೆಗೆ ಆಲಸ್ಯಮಾಡುವಿರಿ?
Kannada BSI JV (ಕನ್ನಡ ಸತ್ಯವೇದವು J.V. (BSI))
ಅಗ ಯೆಹೋಶುವನು ಇಸ್ರಾಯೇಲ್ಯರಿಗೆ - ನಿಮ್ಮ ಪಿತೃಗಳ ದೇವರಾದ ಯೆಹೋವನು ನಿಮಗೆ ಕೊಟ್ಟ ದೇಶವನ್ನು ಸ್ವಾಧೀನಮಾಡಿಕೊಳ್ಳುವದರಲ್ಲಿ ಇನ್ನೆಷ್ಟು ತಡಮಾಡುತ್ತೀರಿ?
Kannada Bible (KNCL) BSI 2016
ಆದುದರಿಂದ ಯೆಹೋಶುವ ಅವರಿಗೆ, “ನಿಮ್ಮ ಪೂರ್ವಜರ ದೇವರಾದ ಸರ್ವೇಶ್ವರ ನಿಮಗೆ ಕೊಟ್ಟ ನಾಡನ್ನು ಸ್ವಾಧೀನ ಮಾಡಿಕೊಳ್ಳಲು ಇನ್ನೆಷ್ಟು ತಡ ಮಾಡುತ್ತಿರುವಿರಿ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋಶುವನು ಇಸ್ರಾಯೇಲರಿಗೆ, “ನಿಮ್ಮ ತಂದೆಗಳ ದೇವರಾದ ಯೆಹೋವ ದೇವರು ನಿಮಗೆ ಕೊಟ್ಟ ದೇಶವನ್ನು ಸ್ವಾಧೀನಮಾಡಿಕೊಳ್ಳುವುದಕ್ಕೆ ನೀವು ಎಷ್ಟರವರೆಗೆ ಆಲಸ್ಯ ಮಾಡುವಿರಿ?