Joshua 18:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದ್ದರಿಂದ ಪ್ರತಿಯೊಂದು ಕುಲದಿಂದ ಮೂರು ಮೂರು ಜನರನ್ನು ಆರಿಸಬೇಕು. ಭೂಮಿಯನ್ನು ಪರಿಶೀಲಿಸಲು ನಾನು ಅವರನ್ನು ಕಳುಹಿಸುತ್ತೇನೆ. ಅವರು ಭೂಮಿಯನ್ನು ಸೂಕ್ಷ್ಮವಾಗಿ ಪರಿಶೀಲಿಸಿ ಅದರ ನಕ್ಷೆಯನ್ನು ಮಾಡಿ ನನ್ನ ಬಳಿಗೆ ತೆಗೆದುಕೊಂಡು ಬರಲಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪ್ರತಿಯೊಂದು ಕುಲದಿಂದ ಮೂರು ಮೂರು ಜನರನ್ನು ನೇಮಿಸಿರಿ. ನಾನು ಅವರನ್ನು ಕಳುಹಿಸುವೆನು. ಅವರು ಹೋಗಿ ದೇಶದಲ್ಲೆಲ್ಲಾ ಸಂಚರಿಸಿ ತಮ್ಮ ತಮ್ಮ ಕುಲಗಳಿಗನುಸಾರವಾಗಿ ಎಲ್ಲಾ ಪ್ರದೇಶಗಳ ಪಟ್ಟಿಯನ್ನು ಬರೆದುಕೊಂಡು ನನ್ನ ಬಳಿಗೆ ಬರಲಿ.
Kannada BSI Bible 2016
ಒಂದೊಂದು ಗೋತ್ರಕ್ಕೆ ಮೂರು ಮಂದಿಯ ಪ್ರಕಾರ ನಿಮ್ಮೊಳಗಿಂದ ಕರೆದುಕೊಂಡು ಬನ್ನಿರಿ; ನಾನು ಅವರನ್ನು ಕಳುಹಿಸುವೆನು. ಅವರು ದೇಶದಲ್ಲೆಲ್ಲಾ ಹೋಗಿ ತಮ್ಮ ಬಾಧ್ಯೆತೆಗಳ ಪ್ರಕಾರ ಅದನ್ನು ವಿವರಿಸುವರು, ತರುವಾಯ ನನ್ನ ಬಳಿಗೆ ಅವರು ತಿರುಗಿ ಬರಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಪ್ರತಿಯೊಂದು ಕುಲದಿಂದ ಮೂರು ಮೂರು ಜನರನ್ನು ನೇವಿುಸಿರಿ; ನಾನು ಅವರನ್ನು ಕಳುಹಿಸುವೆನು. ಅವರು ಹೋಗಿ ದೇಶದಲ್ಲೆಲ್ಲಾ ಸಂಚರಿಸಿ ತಮ್ಮ ತಮ್ಮ ಕುಲಗಳಿಗನುಸಾರವಾಗಿ ಎಲ್ಲಾ ಪ್ರದೇಶಗಳ ಪಟ್ಟಿಯನ್ನು ಬರೆದುಕೊಂಡು ನನ್ನ ಬಳಿಗೆ ಬರಲಿ.
Kannada Bible (KNCL) BSI 2016
ಪ್ರತಿಯೊಂದು ಕುಲದಿಂದ ಮೂರುಮೂರು ಮಂದಿಯನ್ನು ನೇಮಿಸಿರಿ. ನಾನು ಅವರನ್ನು ಕಳುಹಿಸುವೆನು. ಅವರು ಹೋಗಿ ನಾಡಿನಲ್ಲೆಲ್ಲಾ ಸಂಚಾರಮಾಡಿ ತಮ್ಮ ತಮ್ಮ ಕುಲಗಳಿಗನುಸಾರ ಎಲ್ಲಾ ಪ್ರದೇಶಗಳ ಪಟ್ಟಿಯನ್ನು ಬರೆದುಕೊಂಡು ನನ್ನ ಬಳಿಗೆ ಬರಲಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಒಂದೊಂದು ಗೋತ್ರಕ್ಕೆ ಮೂರು ಮಂದಿಯ ಪ್ರಕಾರ ನಿಮ್ಮೊಳಗಿಂದ ಕರೆದುಕೊಂಡು ಬನ್ನಿರಿ. ನಾನು ಅವರನ್ನು ಕಳುಹಿಸುವೆನು. ಅವರು ಎದ್ದು ದೇಶದಲ್ಲೆಲ್ಲಾ ಹೋಗಿ ತಮ್ಮ ಬಾಧ್ಯತೆಗಳ ಪ್ರಕಾರ ಅದನ್ನು ಅಳತೆಮಾಡಿ ವಿವರವಾಗಿ ಬರೆಯಲಿ. ತರುವಾಯ ನನ್ನ ಬಳಿಗೆ ಅವರು ಬರಲಿ.