Joshua 18:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ನೀವು ಒಂದು ನಕ್ಷೆಯನ್ನು ಮಾಡಿ ಭೂಮಿಯನ್ನು ಏಳು ಭಾಗಗಳಾಗಿ ವಿಂಗಡಿಸಬೇಕು. ಆ ನಕ್ಷೆಯನ್ನು ನನ್ನ ಬಳಿಗೆ ತೆಗೆದುಕೊಂಡು ಬನ್ನಿ. ಯಾವ ಕುಲದವರು ಯಾವ ಭೂಮಿಯನ್ನು ತೆಗೆದುಕೊಳ್ಳಬೇಕೆಂಬುದನ್ನು ನಮ್ಮ ದೇವರಾದ ಯೆಹೋವನು ನಿರ್ಣಯಿಸಲಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಪಟ್ಟಿಯಲ್ಲಿ ದೇಶವನ್ನು ಏಳು ಪಾಲು ಮಾಡಿ ನನ್ನ ಬಳಿಗೆ ತೆಗೆದುಕೊಂಡು ಬರಬೇಕು. ನಾನು ನಿಮಗೋಸ್ಕರ ನಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಚೀಟು ಹಾಕುವೆನು.
Kannada BSI Bible 2016
ನೀವು ದೇಶವನ್ನು ಏಳು ಪಾಲಾಗಿ ವಿವರಿಸಬೇಕು ಮತ್ತು ಅದರ ವಿವರಗಳನ್ನು ನನ್ನ ಬಳಿಯಲ್ಲಿ ತರಬೇಕು. ಆಗ ನಾನು ಈ ಸ್ಥಳದಲ್ಲಿ ನಮ್ಮ ದೇವರಾದ ಕರ್ತನ ಮುಂದೆ ನಿಮಗೊಸ್ಕರ ಚೀಟುಗಳನ್ನು ಹಾಕುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಪಟ್ಟಿಯಲ್ಲಿ ದೇಶವನ್ನು ಏಳು ಪಾಲುಮಾಡಿ ಇಲ್ಲಿ ನನ್ನ ಬಳಿಗೆ ತೆಗೆದುಕೊಂಡು ಬರಲಿ; ನಾನು ನಿಮಗೋಸ್ಕರ ನಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಚೀಟುಹಾಕುವೆನು.
Kannada Bible (KNCL) BSI 2016
ನೀವು ನಾಡನ್ನು ಏಳು ಪಾಲಾಗಿ ವಿಂಗಡಿಸಿ ನನ್ನ ಬಳಿಗೆ ಬರಬೇಕು. ನಾನು ನಮ್ಮ ದೇವರಾದ ಸರ್ವೇಶ್ವರನ ಸನ್ನಿಧಿಯಲ್ಲಿ ನಿಮಗೋಸ್ಕರ ಚೀಟು ಹಾಕುತ್ತೇನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ದೇಶವನ್ನು ಏಳು ಪಾಲಾಗಿ ವಿತರಿಸಬೇಕು ಮತ್ತು ಅದರ ವಿವರಗಳನ್ನು ಇಲ್ಲಿ ನನ್ನ ಬಳಿಯಲ್ಲಿ ತರಬೇಕು. ಆಗ ನಾನು ಈ ಸ್ಥಳದಲ್ಲಿ ನಮ್ಮ ದೇವರಾದ ಯೆಹೋವ ದೇವರ ಮುಂದೆ ನಿಮಗಾಗಿ ಚೀಟುಗಳನ್ನು ಹಾಕುವೆನು.