Joshua 18:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅಂತೆಯೇ ಅವರು ಹೋಗಿ ಭೂಮಿಯನ್ನು ಚೆನ್ನಾಗಿ ಪರಿಶೀಲಿಸಿದರು; ಯೆಹೋಶುವನಿಗಾಗಿ ನಕ್ಷೆಗಳನ್ನು ತೆಗೆದರು. ಅವರು ಪ್ರತಿಯೊಂದು ಹಳ್ಳಿಯನ್ನು ಪರಿಶೀಲಿಸಿದರು. ಭೂಮಿಯನ್ನು ಏಳು ಭಾಗಗಳಾಗಿ ವಿಂಗಡಿಸಿದರು. ಅವರು ನಕ್ಷೆಗಳನ್ನು ತೆಗೆದು ಯೆಹೋಶುವನ ಬಳಿಗೆ ಶೀಲೋವಿಗೆ ಹಿಂತಿರುಗಿ ಹೋದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಜನರು ಹೊರಟು ದೇಶದಲ್ಲೆಲ್ಲಾ ಸಂಚರಿಸಿ ಒಂದು ಪುಸ್ತಕದಲ್ಲಿ ಅದರ ಗ್ರಾಮ ನಗರಗಳನ್ನೆಲ್ಲಾ ಬರೆದು ಏಳು ಭಾಗಗಳನ್ನಾಗಿ ಮಾಡಿ ಶೀಲೋವಿನಲ್ಲಿದ್ದ ಯೆಹೋಶುವನ ಪಾಳೆಯಕ್ಕೆ ಹಿಂತಿರುಗಿ ಬಂದರು.
Kannada BSI Bible 2016
ಆ ಮನುಷ್ಯರು ಆ ದೇಶಕ್ಕೆ ಹೋಗಿ ಅದನ್ನು ಅದರ ಪಟ್ಟಣಗಳ ಪ್ರಕಾರ ಏಳು ಪಾಲಾಗಿ ಒಂದು ಪುಸ್ತಕದಲ್ಲಿ ಬರಕೊಂಡು ಶೀಲೋವಿ ನಲ್ಲಿರುವ ಪಾಳೆಯಕ್ಕೆ ಯೆಹೋಶುವನ ಬಳಿಗೆ ತಿರಿಗಿ ಬಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಜನರು ಹೊರಟು ದೇಶದಲ್ಲೆಲ್ಲಾ ಸಂಚರಿಸಿ ಒಂದು ಪುಸ್ತಕದಲ್ಲಿ ಅದರ ಗ್ರಾಮನಗರಗಳನ್ನೆಲ್ಲಾ ಬರೆದು ಏಳು ಭಾಗಗಳನ್ನು ಮಾಡಿ ಶೀಲೋವಿನಲ್ಲಿದ್ದ ಯೆಹೋಶುವನ ಪಾಳೆಯಕ್ಕೆ ಹಿಂದಿರುಗಿ ಬಂದರು.
Kannada Bible (KNCL) BSI 2016
ಆ ಜನರು ಹೊರಟು ನಾಡಿನಲ್ಲೆಲ್ಲಾ ಸಂಚರಿಸಿ ಒಂದು ಪುಸ್ತಕದಲ್ಲಿ ಗ್ರಾಮ-ನಗರಗಳನ್ನೆಲ್ಲಾ ಬರೆದು ಏಳು ಭಾಗಗಳನ್ನಾಗಿ ಮಾಡಿ ಶೀಲೋವಿನಲ್ಲಿದ್ದ ಯೆಹೋಶುವನ ಪಾಳೆಯಕ್ಕೆ ಹಿಂದಿರುಗಿ ಬಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ಮನುಷ್ಯರು ಆ ನಾಡಿಗೆ ಹೋಗಿ, ಅದರ ಪಟ್ಟಣಗಳ ಪ್ರಕಾರ ಏಳು ಪಾಲಾಗಿ ಒಂದು ಗ್ರಂಥದಲ್ಲಿ ಬರೆದುಕೊಂಡು ಶೀಲೋವಿನಲ್ಲಿರುವ ಪಾಳೆಯಕ್ಕೆ ಯೆಹೋಶುವನ ಬಳಿಗೆ ತಿರುಗಿ ಬಂದರು.