Joshua 19:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅನಂತರ ಯೆಹೋಶುವನು ಸಿಮೆಯೋನ್ ಕುಲದ ಎಲ್ಲ ಗೋತ್ರಗಳಿಗೆ ಅವರ ಪಾಲಿನ ಭೂಮಿಯನ್ನು ಕೊಟ್ಟನು. ಅವರಿಗೆ ಸಿಕ್ಕ ಭೂಮಿಯು ಯೆಹೂದ ಕುಲದವರಿಗೆ ಸೇರಿದ ಭೂಭಾಗದ ಮಧ್ಯದಲ್ಲಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಚೀಟು ಎರಡನೆಯ ಸಾರಿ ಸಿಮೆಯೋನನ ಕುಲದವರಿಗೆ ಬಿದ್ದಿತು. ಸಿಮೆಯೋನನ ಕುಲದ ಗೋತ್ರಗಳ ಸ್ವತ್ತು ಯೆಹೂದ ಕುಲದವರ ಸ್ವತ್ತಿನ ಮಧ್ಯದಲ್ಲಿತ್ತು.
Kannada BSI Bible 2016
ಎರಡನೇ ಚೀಟು ಸಿಮೆಯೋನನಿಗೆ ಬಿತ್ತು. ಸಿಮೆಯೋನನ ಗೋತ್ರದ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರವಾಯಿತು. ಅವರ ಬಾಧ್ಯತೆ ಯೂದನ ಮಕ್ಕಳ ಬಾಧ್ಯೆತೆಯ ಮಧ್ಯದಲ್ಲಿತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಚೀಟು ಎರಡನೆಯ ಸಾರಿ ಸಿಮೆಯೋನ್ ಕುಲದವರಿಗೆ ಬಿದ್ದಿತು. ಸಿಮೆಯೋನ್ ಕುಲದ ಗೋತ್ರಗಳ ಸ್ವಾಸ್ತ್ಯವು ಯೆಹೂದಕುಲದವರ ಸ್ವಾಸ್ತ್ಯದ ಮಧ್ಯದಲ್ಲಿತ್ತು.
Kannada Bible (KNCL) BSI 2016
ಎರಡನೇ ಸಾರಿಯ ಚೀಟು ಸಿಮೆಯೋನ್ ಕುಲದವರಿಗೆ ಬಿದ್ದಿತು. ಈ ಸಿಮೆಯೋನ್ ಕುಲದ ಗೋತ್ರಗಳ ಸೊತ್ತು ಯೂದಕುಲದವರ ಸೊತ್ತಿನ ಮಧ್ಯದಲ್ಲಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಎರಡನೆಯ ಚೀಟು ಬಿದ್ದ ಭಾಗವು ಸಿಮೆಯೋನನ ಗೋತ್ರದವರದಾಗಿತ್ತು. ಸಿಮೆಯೋನನ ಗೋತ್ರದವರಿಗೆ ಅವರ ಕುಟುಂಬಗಳ ಪ್ರಕಾರ ದೊರೆಯಿತು. ಅವರ ಸೊತ್ತು ಯೆಹೂದ ಗೋತ್ರದ ಸೊತ್ತಿನ ಮಧ್ಯದಲ್ಲಿತ್ತು.