Joshua 19:48 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಈ ಎಲ್ಲ ನಗರಗಳನ್ನು ಮತ್ತು ಅವುಗಳ ಸುತ್ತಮುತ್ತಲಿನ ಹೊಲಗದ್ದೆಗಳನ್ನು ದಾನ್‌ಕುಲದವರಿಗೆ ಕೊಡಲಾಯಿತು. ಪ್ರತಿಯೊಂದು ಗೋತ್ರದವರು ತಮ್ಮ ಪಾಲಿನ ಭೂಮಿಯನ್ನು ಪಡೆದುಕೊಂಡರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದಾನ್ ಕುಲದ ಗೋತ್ರಗಳಿಗೆ ಸಿಕ್ಕಿದ ಸ್ವತ್ತು ಅದರಲ್ಲಿದ್ದ ಗ್ರಾಮ ಮತ್ತು ನಗರಗಳು ಇವೇ.
Kannada BSI Bible 2016
ಈ ಪಟ್ಟಣಗಳೂ ಅವುಗಳ ಗ್ರಾಮಗಳೂ ದಾನನ ಮಕ್ಕಳ ಗೋತ್ರಕ್ಕೆ ಅವರ ಕುಟುಂಬಗಳ ಪ್ರಕಾರ ದೊರೆತ ಬಾಧ್ಯತೆಯು ಇದೇ.
Kannada BSI JV (ಕನ್ನಡ ಸತ್ಯವೇದವು J.V. (BSI))
ದಾನ್‍ಕುಲದ ಗೋತ್ರಗಳಿಗೆ ಸಿಕ್ಕಿದ ಸ್ವಾಸ್ತ್ಯವೂ ಅದರಲ್ಲಿದ್ದ ಗ್ರಾಮನಗರಗಳೂ ಇವೇ.
Kannada Bible (KNCL) BSI 2016
ದಾನ್ ಕುಲದ ಗೋತ್ರಗಳಿಗೆ ದೊರಕಿದ ಸೊತ್ತು ಹಾಗೂ ಅದರಲ್ಲಿದ್ದ ನಗರ ಹಾಗೂ ಗ್ರಾಮಗಳು ಇವೇ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈ ಪಟ್ಟಣಗಳೂ, ಅವುಗಳ ಗ್ರಾಮಗಳೂ, ದಾನ್ ಗೋತ್ರಕ್ಕೆ ಅವರ ಕುಟುಂಬಗಳ ಪ್ರಕಾರ ದೊರೆತ ಬಾಧ್ಯತೆಯು ಇದೇ.