Joshua 19:49 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಹೀಗೆ ದೇಶವನ್ನು ಆಯಾ ಕುಲಗಳವರಿಗೆ ನಾಯಕರು ಹಂಚಿಕೊಟ್ಟರು. ಆಗ ಇಸ್ರೇಲರು ನೂನನ ಮಗನಾದ ಯೆಹೋಶುವನಿಗೂ ಸ್ವಲ್ಪ ಭೂಮಿಯನ್ನು ಕೊಡಬೇಕೆಂದು ನಿರ್ಧರಿಸಿದರು. ಈ ಭೂಮಿಯನ್ನು ಅವನಿಗೆ ಕೊಡುವುದಾಗಿ ವಾಗ್ದಾನ ಮಾಡಲಾಗಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ರಾಯೇಲ್ಯರು ದೇಶವನ್ನು ಮೇರೆಗಳ ಪ್ರಕಾರ ತಮ್ಮೊಳಗೆ ಹಂಚಿಕೊಂಡ ಮೇಲೆ ನೂನನ ಮಗನಾದ ಯೆಹೋಶುವನಿಗೂ ತಮ್ಮದರಲ್ಲಿ ಪಾಲು ಕೊಟ್ಟರು.
Kannada BSI Bible 2016
ಅವರು ದೇಶವನ್ನು ಅದರ ಮೇರೆಗಳ ಪ್ರಕಾರ ಬಾಧ್ಯತೆಯಾಗಿ ಹಂಚಿಕೊಂಡು ತೀರಿಸಿದಾಗ ಇಸ್ರಾ ಯೇಲ್ ಮಕ್ಕಳು ನೂನನ ಮಗನಾದ ಯೆಹೋಶುವ ನಿಗೆ ತಮ್ಮ ಮಧ್ಯದಲ್ಲಿ ಬಾಧ್ಯತೆಯನ್ನು ಕೊಟ್ಟರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲ್ಯರು ದೇಶವನ್ನು ಮೇರೆಗಳ ಪ್ರಕಾರ ತಮ್ಮೊಳಗೆ ಹಂಚಿಕೊಂಡ ಮೇಲೆ ನೂನನ ಮಗನಾದ ಯೆಹೋಶುವನಿಗೂ ತಮ್ಮದರಲ್ಲಿ ಪಾಲುಕೊಟ್ಟರು.
Kannada Bible (KNCL) BSI 2016
ಇಸ್ರಯೇಲರು ನಾಡನ್ನು ಎಲ್ಲೆಎಲ್ಲೆಗಳ ಪ್ರಕಾರ ತಮ್ಮೊಳಗೆ ಹಂಚಿಕೊಂಡ ಮೇಲೆ ನೂನನ ಮಗ ಯೆಹೋಶುವನಿಗೂ ತಮ್ಮದರಲ್ಲಿ ಪಾಲು ಕೊಟ್ಟರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ದೇಶವನ್ನು ಅದರ ಮೇರೆಗಳ ಪ್ರಕಾರ ಬಾಧ್ಯತೆಯಾಗಿ ಹಂಚಿಕೊಂಡ ಮೇಲೆ ಇಸ್ರಾಯೇಲರು ನೂನನ ಮಗನಾದ ಯೆಹೋಶುವನಿಗೆ ತಮ್ಮ ಮಧ್ಯದಲ್ಲಿ ಪಾಲನ್ನು ಕೊಟ್ಟರು.