Joshua 19:50 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ಭೂಮಿಯನ್ನು ಕೊಡಬೇಕೆಂಬುದು ಯೆಹೋವನ ಆಜ್ಞೆಯಾಗಿತ್ತು. ಆದ್ದರಿಂದ ಅವರು ಯೆಹೋಶುವನ ಅಪೇಕ್ಷೆಯಂತೆ ಎಫ್ರಾಯೀಮ್ಯರ ಬೆಟ್ಟಪ್ರದೇಶದಲ್ಲಿರುವ ತಿಮ್ನತ್‌ಸೆರಹ ಎಂಬ ಪಟ್ಟಣವನ್ನು ಅವನಿಗೆ ಕೊಟ್ಟರು. ಯೆಹೋಶುವನು ಆ ಪಟ್ಟಣವನ್ನು ಭದ್ರಗೊಳಿಸಿ ಅಲ್ಲಿ ವಾಸವಾಗಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ತನಗೋಸ್ಕರ ಎಫ್ರಾಯೀಮ್ ಪರ್ವತ ಪ್ರದೇಶದಲ್ಲಿರುವ ತಿಮ್ನತ್ ಸೆರಹ ಎಂಬ ಪಟ್ಟಣವನ್ನು ಕೇಳಿಕೊಳ್ಳಲು ಅವರು ಯೆಹೋವನ ಆಜ್ಞೆಯಂತೆ ಅದನ್ನು ಅವನಿಗೆ ಕೊಟ್ಟು ಬಿಟ್ಟರು. ಅವನು ಅದನ್ನು ಹೊಸದಾಗಿ ಕಟ್ಟಿಕೊಂಡು ಅದರಲ್ಲೇ ವಾಸವಾಗಿದ್ದನು.
Kannada BSI Bible 2016
ಅವನು ಕೇಳಿದ ಎಫ್ರಾಯಾಮ್‌ ಬೆಟ್ಟದಲ್ಲಿರುವ ತಿಮ್ನತ್‌ಸೆರಹ ಎಂಬ ಪಟ್ಟಣವನ್ನು ಕರ್ತನ ಮಾತಿನ ಪ್ರಕಾರ ಕೊಟ್ಟರು. ಅವನು ಆ ಪಟ್ಟಣವನ್ನು ಕಟ್ಟಿಸಿ ಅದರಲ್ಲಿ ವಾಸವಾಗಿದ್ದನು.ಯಾಜಕನಾದ ಎಲಿಯಾ ಜರನೂ ನೂನನ ಮಗನಾದ ಯೆಹೋಶುವನೂ ಇಸ್ರಾಯೇಲಿನ ಮಕ್ಕಳ ಗೋತ್ರಗಳ ಪಿತೃಗಳ ಹಿರಿಯರೂ ಶೀಲೋವಿನಲ್ಲಿ ಸಭೆಯ ಗುಡಾರದ ಬಾಗಲ ಬಳಿಯಲ್ಲಿ ಕರ್ತನ ಸಮ್ಮುಖದಲ್ಲಿ ಚೀಟು ಹಾಕಿ ಹಂಚಿಕೊಟ್ಟ ಬಾಧ್ಯತೆಗಳು ಇವೇ. ಹೀಗೆ ಅವರು ದೇಶವನ್ನು ಭಾಗವಾಗಿ ಹಂಚಿಕೊಂಡು ಪೂರೈಸಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ತನಗೋಸ್ಕರ ಎಫ್ರಾಯೀಮ್ಯರ ಪರ್ವತ ಪ್ರದೇಶದಲ್ಲಿರುವ ತಿಮ್ನತ್‍ಸೆರಹ ಎಂಬ ಪಟ್ಟಣವನ್ನು ಕೇಳಿಕೊಳ್ಳಲು ಅವರು ಯೆಹೋವನ ಆಜ್ಞೆಯಂತೆ ಅದನ್ನು ಅವನಿಗೆ ಕೊಟ್ಟುಬಿಟ್ಟರು. ಅವನು ಅದನ್ನು ಕಟ್ಟಿಕೊಂಡು ಅದರಲ್ಲಿ ವಾಸವಾಗಿದ್ದನು.
Kannada Bible (KNCL) BSI 2016
ಆತ ತನಗೋಸ್ಕರ ಎಫ್ರಯಿಮರ ಮಲೆನಾಡಿನಲ್ಲಿರುವ ‘ತಿಮ್ನತ್ ಸೆರಹ’ ಎಂಬ ನಗರವನ್ನು ಕೇಳಿಕೊಂಡನು. ಸರ್ವೇಶ್ವರನ ಆಜ್ಞೆಯಂತೆ ಅವರು ಅದನ್ನು ಅವನಿಗೆ ಕೊಟ್ಟರು. ಅವನು ಅದನ್ನು ಹೊಸದಾಗಿ ಕಟ್ಟಿ ಅದರಲ್ಲೇ ವಾಸಮಾಡಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಕೇಳಿದ ಎಫ್ರಾಯೀಮ್ ಬೆಟ್ಟದಲ್ಲಿರುವ ತಿಮ್ನತ್ ಸೆರಹ ಎಂಬ ಪಟ್ಟಣವನ್ನು ಯೆಹೋವ ದೇವರ ಆಜ್ಞೆಯ ಪ್ರಕಾರ ಕೊಟ್ಟರು. ಅವನು ಪಟ್ಟಣವನ್ನು ಕಟ್ಟಿಕೊಂಡು ಅಲ್ಲಿಯೇ ನೆಲೆಸಿದನು.