Joshua 19:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸಿಮೆಯೋನ್ಯರ ಭೂಮಿಯು ಯೆಹೂದದ ಭೂಮಿಯ ಒಂದು ಭಾಗವಾಗಿತ್ತು. ಯೆಹೂದ್ಯರಿಗೆ ಅವರ ಅವಶ್ಯಕತೆಗಿಂತ ಹೆಚ್ಚು ಭೂಮಿ ಇದ್ದಕಾರಣ ಸಿಮೆಯೋನ್ಯರು ಅದರಲ್ಲಿ ಒಂದು ಭಾಗವನ್ನು ಪಡೆದುಕೊಂಡರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸಿಮೆಯೋನ್ಯರ ಈ ಸ್ವತ್ತು ಯೆಹೂದ್ಯರ ಸ್ವತ್ತಿನ ಒಂದು ಭಾಗವಾಗಿತ್ತು. ಯೆಹೂದ್ಯರಿಗೆ ದೊರಕಿದ ಪ್ರದೇಶವು ಹೆಚ್ಚಾಗಿದ್ದುದರಿಂದ ಸಿಮೆಯೋನ್ಯರಿಗೂ ಅದರಲ್ಲೇ ಪಾಲು ಸಿಕ್ಕಿತು.
Kannada BSI Bible 2016
ಸಿಮೆಯೋನನ ಮಕ್ಕಳ ಬಾಧ್ಯತೆ ಯೂದನ ಮಕ್ಕಳ ಭಾಗದಲ್ಲಿ ಇತ್ತು. ಯಾಕಂದರೆ ಯೂದನ ಮಕ್ಕಳ ಭಾಗವು ಅವರಿಗೆ ಹೆಚ್ಚಾಗಿದ್ದ ಕಾರಣ ಸಿಮೆಯೋನನ ಮಕ್ಕಳಿಗೆ ಅವರ ಭಾಗದಲ್ಲಿ ಬಾಧ್ಯತೆ ಉಂಟಾಯಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಈ ಸ್ವಾಸ್ತ್ಯವು ಯೆಹೂದ್ಯರ ಸ್ವಾಸ್ತ್ಯದ ಒಂದು ಭಾಗ. ಯೆಹೂದ್ಯರಿಗೆ ದೊರಕಿದ ಪ್ರದೇಶವು ಹೆಚ್ಚಾಗಿದ್ದದರಿಂದ ಸಿಮೆಯೋನ್ಯರಿಗೂ ಅದರಲ್ಲೇ ಪಾಲುಸಿಕ್ಕಿತು.
Kannada Bible (KNCL) BSI 2016
ಈ ಆಸ್ತಿ ಯೂದವಂಶದ ಆಸ್ತಿಯಲ್ಲಿ ಒಂದು ಭಾಗ. ಯೂದವಂಶದವರಿಗೆ ದೊರಕಿದ ಪ್ರದೇಶ ಹೆಚ್ಚಾಗಿದ್ದುದರಿಂದ ಸಿಮೆಯೋನ್ಯರಿಗೆ ಅದರಲ್ಲೆ ಪಾಲು ಸಿಕ್ಕಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸಿಮೆಯೋನನ ಗೋತ್ರದವರಿಗೆ ಬಾಧ್ಯತೆ ಯೆಹೂದ ಗೋತ್ರದವರ ಭಾಗದಿಂದ ಸಿಕ್ಕಿತು. ಏಕೆಂದರೆ ಯೆಹೂದ ಗೋತ್ರದ ಭಾಗವು ಅವರಿಗೆ ಹೆಚ್ಚಾಗಿದ್ದ ಕಾರಣ, ಸಿಮೆಯೋನನ ಗೋತ್ರದವರು ಯೆಹೂದ ಗೋತ್ರದವರ ಎಲ್ಲೆಯ ಒಳಗಿಂದಲೇ ತಮ್ಮ ಪಾಲನ್ನು ಹೊಂದಿದರು.