Joshua 2:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅದಕ್ಕೆ ಅವರು, “ನಮ್ಮ ಪ್ರಾಣವನ್ನಾದರೂ ಕೊಟ್ಟು ನಿಮ್ಮ ಪ್ರಾಣ ಉಳಿಸುತ್ತೇವೆ. ಆದರೆ ನೀವು ಇದನ್ನು ಯಾರಿಗೂ ಹೇಳಬೇಡಿ. ಯೆಹೋವನು ಈ ದೇಶವನ್ನು ನಮಗೆ ಅನುಗ್ರಹಿಸಿದ ಮೇಲೆ ನಾವು ನಿಮಗೆ ದಯೆ ತೋರುತ್ತೇವೆ. ನೀನು ನಮ್ಮನ್ನು ನಂಬಬಹುದು” ಎಂದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಆ ಗೂಢಚಾರರು “ನೀವು ನಮ್ಮ ವಿಷಯವನ್ನು ಬಹಿರಂಗ ಮಾಡದಿದ್ದರೆ ನಾವು ನಿಮ್ಮ ಪ್ರಾಣಕ್ಕೆ ಹೊಣೆಯಾಗಿರುತ್ತೇವೆ; ಯೆಹೋವನು ಈ ದೇಶವನ್ನು ನಮಗೆ ಅನುಗ್ರಹಿಸಿದ ಮೇಲೆ ನಾವು ಕೊಟ್ಟ ಮಾತಿನಂತೆ ನಿನ್ನಲ್ಲಿ ದಯೆಯಿಂದಲೂ ನಂಬಿಗಸ್ತಿಕೆಯಿಂದಲೂ ನಡೆದುಕೊಳ್ಳುವೆವು” ಅಂದರು.
Kannada BSI Bible 2016
ಆ ಮನುಷ್ಯರು ಆಕೆಗೆ--ನೀನು ಈ ನಮ್ಮ ಕಾರ್ಯವನ್ನು ಬಹಿರಂಗಮಾಡದೆ ಇದ್ದರೆ ನಮ್ಮ ಪ್ರಾಣವು ನಿಮಗೋಸ್ಕರ ಇರುವದು. ಕರ್ತನು ನಮಗೆ ಈ ದೇಶವನ್ನು ಕೊಟ್ಟಾಗ ಸತ್ಯದಿಂದಲೂ ದಯ ದಿಂದಲೂ ನಡೆದುಕೊಳ್ಳುವೆವು ಅಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಆ ಮನುಷ್ಯರು - ನೀವು ನಮ್ಮ ಸಂಗತಿಯನ್ನು ಹೊರಪಡಿಸದಿದ್ದರೆ ನಾವು ನಿಮ್ಮ ಪ್ರಾಣಕ್ಕೆ ಹೊಣೆಯಾಗಿರುವೆವು; ಯೆಹೋವನು ಈ ದೇಶವನ್ನು ನಮಗೆ ಅನುಗ್ರಹಿಸಿದ ಮೇಲೆ ನಮ್ಮ ಮಾತಿನಂತೆ ನಿನ್ನಲ್ಲಿ ದಯದಿಂದ ನಡೆದುಕೊಳ್ಳುವೆವು ಅಂದರು.
Kannada Bible (KNCL) BSI 2016
ಆಗ ಆ ಗೂಢಚಾರರು, “ನೀವು ನಮ್ಮ ಸಂಗತಿಯನ್ನು ಹೊರಪಡಿಸದಿದ್ದರೆ, ನಾವು ನಿಮ್ಮ ಪ್ರಾಣಕ್ಕೆ ಹೊಣೆಯಾಗಿರುತ್ತೇವೆ. ಸರ್ವೇಶ್ವರಸ್ವಾಮಿ ಈ ನಾಡನ್ನು ನಮಗೆ ಅನುಗ್ರಹಿಸಿದ ಮೇಲೆ ನಾವು ಕೊಟ್ಟ ಮಾತಿನಂತೆ ದಯೆಯಿಂದ ನಡೆದುಕೊಳ್ಳುತ್ತೇವೆ,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅವರು ಆಕೆಗೆ, “ನೀನು ಈ ನಮ್ಮ ಕಾರ್ಯವನ್ನು ಬಹಿರಂಗ ಮಾಡದೆ ಇದ್ದರೆ, ನಾವು ನಿಮ್ಮ ಪ್ರಾಣಕ್ಕೆ ಹೊಣೆಯಾಗಿ ಇರುವೆವು. ಯೆಹೋವ ದೇವರು ನಮಗೆ ದೇಶವನ್ನು ಕೊಟ್ಟಾಗ, ಸತ್ಯದಿಂದಲೂ, ದಯೆಯಿಂದಲೂ ನಡೆದುಕೊಳ್ಳುವೆವು,” ಎಂದರು.