Joshua 2:16 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಕೆ ಅವರಿಗೆ, “ನೀವು ಪಶ್ಚಿಮದಿಕ್ಕಿನ ಕಡೆಗೆ ಹೋಗಿ ಬೆಟ್ಟಗಳಲ್ಲಿ ಅಡಗಿಕೊಳ್ಳಿರಿ; ಆಗ ರಾಜಭಟರು ನಿಮ್ಮನ್ನು ಕಂಡುಹಿಡಿಯಲಾರರು; ಅಲ್ಲಿ ಮೂರು ದಿನಗಳವರೆಗೆ ಅಡಗಿಕೊಂಡಿದ್ದು ರಾಜಭಟರು ಹಿಂದಿರುಗಿದ ಮೇಲೆ ನೀವು ನಿಮ್ಮ ಸ್ಥಳಕ್ಕೆ ಹೋಗಬಹುದು” ಎಂದು ಹೇಳಿದಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನಿಮ್ಮನ್ನು ಹಿಂದಟ್ಟುವವರಿಗೆ ನೀವು ಸಿಕ್ಕದಂತೆ ಆ ಬೆಟ್ಟಕ್ಕೆ ಓಡಿ ಹೋಗಿ ಅಲ್ಲಿ ಮೂರು ದಿನ ಅಡಗಿಕೊಂಡಿದ್ದು, ತರುವಾಯ ಅವರು ಹಿಂದಿರುಗಿದ ಮೇಲೆ ನಿಮ್ಮ ದಾರಿ ಹಿಡಿದು ಹೋಗಿರಿ” ಎಂದಳು.
Kannada BSI Bible 2016
ನಿಮ್ಮನ್ನು ಹಿಂದಟ್ಟುವವರು ನಿಮಗೆ ಅಡ್ಡಬಾರದ ಹಾಗೆ ನೀವು ಬೆಟ್ಟಕ್ಕೆ ಹೋಗಿ ಅವರು ತಿರಿಗಿ ಬರುವ ವರೆಗೂ ಅಲ್ಲಿ ಮೂರು ದಿವಸ ಅಡಗಿ ಕೊಂಡಿದ್ದು ತರುವಾಯ ನಿಮ್ಮ ಮಾರ್ಗವಾಗಿ ಹೋಗಿರಿ ಅಂದಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಪರ್ವತಕ್ಕೆ ಓಡಿಹೋಗಿ ಅಲ್ಲಿ ಮೂರು ದಿವಸ ಅಡಗಿಕೊಂಡಿದ್ದು ಅವರು ಹಿಂದಿರುಗಿದ ಮೇಲೆ ನಿಮ್ಮ ದಾರಿ ಹಿಡಿದು ಹೋಗಿರಿ ಅಂದಳು.
Kannada Bible (KNCL) BSI 2016
ಅಲ್ಲದೆ ಅವರಿಗೆ, “ನಿಮ್ಮನ್ನು ಹಿಂದಟ್ಟುವವರಿಗೆ ನೀವು ಸಿಕ್ಕದಂತೆ ಆ ಬೆಟ್ಟಕ್ಕೆ ಓಡಿಹೋಗಿ, ಮೂರು ದಿನ ಅವಿತುಕೊಂಡಿರಿ. ಅವರು ಹಿಂದಿರುಗಿದ ಮೇಲೆ ನಿಮ್ಮ ದಾರಿ ಹಿಡಿದು ಹೋಗಿ,” ಎಂದಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಕೆಯು ಅವರಿಗೆ, “ನಿಮ್ಮನ್ನು ಹಿಂದಟ್ಟುವವರು ನಿಮಗೆ ಅಡ್ಡಬಾರದ ಹಾಗೆ ನೀವು ಬೆಟ್ಟಕ್ಕೆ ಹೋಗಿ, ಅವರು ತಿರುಗಿ ಬರುವವರೆಗೂ ಅಲ್ಲಿ ಮೂರು ದಿವಸ ಅಡಗಿಕೊಂಡಿದ್ದು, ತರುವಾಯ ನಿಮ್ಮ ಮಾರ್ಗವಾಗಿ ಹೋಗಿರಿ,” ಎಂದಳು.