Joshua 2:18 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಮ್ಮನ್ನು ಇಳಿಸುವುದಕ್ಕಾಗಿ ನೀನು ಉಪಯೋಗಿಸಿದ ಈ ಕೆಂಪು ಹಗ್ಗವನ್ನು ನಾವು ಈ ದೇಶಕ್ಕೆ ಹಿಂತಿರುಗಿ ಬರುವಾಗ ನೀನು ಕಿಟಕಿಗೆ ಕಟ್ಟಿರಬೇಕು. ನಿನ್ನ ತಂದೆತಾಯಿಗಳು, ನಿನ್ನ ಸಹೋದರ ಸಹೋದರಿಯರು ಮತ್ತು ನಿನ್ನ ಕುಟುಂಬ ವರ್ಗದವರು ನಿನ್ನ ಸಂಗಡ ಈ ಮನೆಯಲ್ಲಿರಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾವು ಈ ದೇಶದಲ್ಲಿ ಪ್ರವೇಶಿಸುವಾಗ ನೀನು ನಮ್ಮನ್ನು ಇಳಿಸಿದ ಕಿಟಿಕಿಗೆ ಈ ಕೆಂಪು ದಾರವನ್ನು ಕಟ್ಟಬೇಕು ಮತ್ತು ನಿನ್ನ ತಂದೆತಾಯಿಗಳನ್ನೂ ಅಣ್ಣತಮ್ಮಂದಿರನ್ನೂ ಎಲ್ಲಾ ಬಂಧುಬಳಗದವರನ್ನೂ ನಿನ್ನ ಮನೆಯಲ್ಲಿ ಸೇರಿಸಿಕೊಂಡಿರಬೇಕು.
Kannada BSI Bible 2016
ಇಗೋ, ನಾವು ದೇಶ ದಲ್ಲಿ ಪ್ರವೇಶಿಸುವಾಗ ನೀನು ನಮ್ಮನ್ನು ಕಿಟಿಕಿಯಿಂದ ಇಳಿಯಬಿಟ್ಟ ಈ ಕೆಂಪು ನೂಲಿನ ದಾರವನ್ನು ಕಟ್ಟಿ ನಿನ್ನ ತಂದೆತಾಯಿಯನ್ನೂ ಸಹೋದರರನ್ನೂ ನಿನ್ನ ತಂದೆಯ ಮನೆಯವರೆಲ್ಲರನ್ನೂ ನಿನ್ನ ಮನೆಯಲ್ಲಿ ಕೂಡಿಸಿಕೊಳ್ಳಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಗೋ, ನಾವು ಈ ದೇಶದಲ್ಲಿ ಪ್ರವೇಶಿಸುವಾಗ ನೀನು ನಮ್ಮನ್ನು ಇಳಿಸಿದ ಕಿಟಕಿಗೆ ಈ ಕೆಂಪು ದಾರವನ್ನು ಕಟ್ಟಬೇಕು. ಮತ್ತು ನಿನ್ನ ತಂದೆತಾಯಿಗಳನ್ನೂ ಅಣ್ಣ ತಮ್ಮಂದಿರನ್ನೂ ಎಲ್ಲಾ ಬಳಗದವರನ್ನೂ ನಿನ್ನ ಮನೆಯಲ್ಲಿ ಸೇರಿಸಿಕೊಂಡಿರಬೇಕು.
Kannada Bible (KNCL) BSI 2016
ನಾವು ಈ ನಾಡನ್ನು ಪ್ರವೇಶಿಸುವಾಗ ನೀನು ನಮ್ಮನ್ನು ಇಳಿಸಿದ ಕಿಟಕಿಗೆ ಈ ಕೆಂಪುದಾರವನ್ನು ಕಟ್ಟಬೇಕು ಮತ್ತು ನಿನ್ನ ತಂದೆತಾಯಿಗಳನ್ನು, ಅಣ್ಣತಮ್ಮಂದಿರನ್ನು, ಎಲ್ಲಾ ಬಂಧುಬಳಗದವರನ್ನು ನಿನ್ನ ಮನೆಯಲ್ಲೇ ಸೇರಿಸಿಕೊಂಡಿರಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಗೋ, ನಾವು ಈ ದೇಶದಲ್ಲಿ ಪ್ರವೇಶಿಸುವಾಗ, ನೀನು ನಮ್ಮನ್ನು ಇಳಿಸಿದ ಕಿಟಿಕಿಗೆ ಈ ಕಡುಗೆಂಪು ಹಗ್ಗವನ್ನು ಕಟ್ಟಿ, ನಿನ್ನ ತಂದೆಯನ್ನೂ, ನಿನ್ನ ತಾಯಿಯನ್ನೂ, ನಿನ್ನ ಸಹೋದರರನ್ನೂ, ನಿನ್ನ ತಂದೆಯ ಮನೆಯವರೆಲ್ಲರನ್ನೂ ನಿನ್ನ ಮನೆಯಲ್ಲಿ ಕೂಡಿಸಿಕೊಳ್ಳಬೇಕು.