Joshua 2:20 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾನು ನಿನಗೆ ಈ ಪ್ರಮಾಣವನ್ನು ಮಾಡಿದ್ದೇವೆ. ಆದರೆ ಇದನ್ನು ನೀನು ಯಾರಿಗೂ ಹೇಳಕೂಡದು; ಒಂದುವೇಳೆ ಹೇಳಿದರೆ, ನಾವು ಈ ಪ್ರಮಾಣದಿಂದ ಮುಕ್ತರಾಗುತ್ತೇವೆ” ಎಂದು ಹೇಳಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ ನೀನು ನಮ್ಮ ವಿಷಯವನ್ನು ಬಹಿರಂಗಪಡಿಸಿದರೆ ನಮ್ಮಿಂದ ಮಾಡಿಸಿದ ವಾಗ್ದಾನಕ್ಕೆ ನಾವು ಹೊಣೆಗಾರರಲ್ಲ” ಎಂದು ಹೇಳಿದರು.
Kannada BSI Bible 2016
ಇದಲ್ಲದೆ ಈ ನಮ್ಮ ಕಾರ್ಯ ವನ್ನು ತಿಳಿಸಿದರೆ ನೀನು ನಮಗೆ ಇಟ್ಟ ಆಣೆಗೆ ನಾವು ಬಿಡುಗಡೆಯಾಗಿರುವೆವು ಅಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ನೀನು ಈ ನಮ್ಮ ಸಂಗತಿಯನ್ನು ಹೊರತರುವದಾದರೆ ನಮ್ಮಿಂದ ಮಾಡಿಸಿದ ಪ್ರಮಾಣದಿಂದ ಬಿಡುಗಡೆಯಾಗಿರುವೆವು ಎಂದರು.
Kannada Bible (KNCL) BSI 2016
ನೀನೇನಾದರೂ ಈ ನಮ್ಮ ವಿಷಯವನ್ನು ಬಹಿರಂಗಪಡಿಸಿದ್ದೇ ಆದರೆ ನಮ್ಮಿಂದ ಮಾಡಿಸಿದ ಪ್ರಮಾಣದಿಂದ ನಾವು ಬಿಡುಗಡೆಯಾಗಿರುತ್ತೇವೆ,” ಎಂದು ಹೇಳಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ನೀನು ಈ ನಮ್ಮ ಕಾರ್ಯವನ್ನು ಬಹಿರಂಗಪಡಿಸಿದರೆ, ನೀನು ನಮಗೆ ಇಟ್ಟ ಆಣೆಯಿಂದ ನಾವು ಬಿಡುಗಡೆಯಾಗಿರುವೆವು,” ಎಂದರು.