Joshua 2:22 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವರು ಅವಳ ಮನೆಯಿಂದ ಹೋಗಿ ಬೆಟ್ಟಗಳಲ್ಲಿ ಅಡಗಿಕೊಂಡು ಮೂರು ದಿನಗಳವರೆಗೆ ಅಲ್ಲೇ ಇದ್ದರು. ರಾಜಭಟರು ದಾರಿಯಲ್ಲೆಲ್ಲಾ ಹುಡುಕಾಡಿ ಕಾಣದೆ ಮೂರು ದಿನಗಳ ತರುವಾಯ ಪಟ್ಟಣಕ್ಕೆ ಹಿಂದಿರುಗಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಗೂಢಚಾರರು ಹೊರಟು ಹೋಗಿ ಆ ಬೆಟ್ಟವನ್ನು ಸೇರಿ ಬೆನ್ನಟ್ಟುವವರು ಹಿಂದಿರುಗುವ ತನಕ ಮೂರು ದಿನಗಳ ಕಾಲ ಅಲ್ಲೇ ತಂಗಿದ್ದರು. ಬೆನ್ನಟ್ಟುವವರು ಅವರನ್ನು ದಾರಿಯುದ್ದಕ್ಕೂ ಹುಡುಕಿ ಕಾಣದೆ ಹಿಂದಿರುಗಿದರು.
Kannada BSI Bible 2016
ಅವರು ಹೋಗಿ ಬೆಟ್ಟಕ್ಕೆ ಸೇರಿ ಹಿಂದಟ್ಟುವವರು ತಿರಿಗಿ ಬರುವ ಪರಿಯಂತರ ಮೂರು ದಿವಸ ಅಲ್ಲೇ ಇದ್ದರು. ಹಿಂದಟ್ಟುವವರು ಮಾರ್ಗದಲ್ಲೆಲ್ಲಾ ಅವ ರನ್ನು ಹುಡುಕಿ ಕಾಣದೆ ಹೋದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಆ ಪರ್ವತವನ್ನು ಸೇರಿ ಬೆನ್ನಟ್ಟುವವರು ಹಿಂದಿರುಗುವ ತನಕ ಮೂರು ದಿವಸ ಅಲ್ಲೇ ಇದ್ದರು. ಬೆನ್ನಟ್ಟುವವರು ಅವರನ್ನು ದಾರಿಯುದ್ದಕ್ಕೂ ಹುಡುಕಿ ಕಾಣದೆ ಹಿಂದಿರುಗಿದರು.
Kannada Bible (KNCL) BSI 2016
ಗೂಢಚಾರರು ಆ ಬೆಟ್ಟವನ್ನು ಸೇರಿ ಬೆನ್ನಟ್ಟುವವರು ಹಿಂದಿರುಗುವ ತನಕ ಮೂರು ದಿನ ಅಲ್ಲೇ ತಂಗಿದ್ದರು. ಬೆನ್ನಟ್ಟುವವರು ಅವರನ್ನು ದಾರಿಯುದ್ದಕ್ಕೂ ಹುಡುಕಿ ಕಾಣದೆ ಹಿಂದಿರುಗಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಹೋಗಿ ಬೆಟ್ಟಕ್ಕೆ ಸೇರಿ ಹಿಂದಟ್ಟುವವರು ತಿರುಗಿ ಬರುವವರೆಗೂ ಮೂರು ದಿನ ಅಲ್ಲೇ ಇದ್ದರು. ಹಿಂದಟ್ಟುವವರು ಮಾರ್ಗದಲ್ಲೆಲ್ಲಾ ಅವರನ್ನು ಹುಡುಕಿ ಕಾಣದೆ ಹೋದರು.