Joshua 2:24 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಯೆಹೋವನು ನಿಜವಾಗಿಯೂ ಆ ದೇಶವನ್ನೆಲ್ಲಾ ನಮಗೆ ದಯಪಾಲಿಸಿದ್ದಾನೆ. ಆ ದೇಶದ ಎಲ್ಲ ಜನರು ನಮ್ಮಿಂದ ಭಯಗೊಂಡಿದ್ದಾರೆ” ಎಂದು ತಿಳಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ ಅವರು “ಯೆಹೋಶುವನಿಗೆ ನಿಶ್ಚಯವಾಗಿ ಯೆಹೋವನು ಆ ದೇಶವನ್ನೆಲ್ಲಾ ನಮ್ಮ ಕೈಗೆ ಒಪ್ಪಿಸಿ ಕೊಟ್ಟಿದ್ದಾನೆ; ಅದರ ನಿವಾಸಿಗಳೆಲ್ಲಾ ನಮ್ಮ ನಿಮಿತ್ತ ನಡುಗುತ್ತಾ ಕಂಗೆಟ್ಟು ಹೋಗಿದ್ದಾರೆ” ಎಂದು ತಿಳಿಸಿದರು.
Kannada BSI Bible 2016
ಅವರು ಯೆಹೋಶುವನಿಗೆ--ನಿಶ್ಚಯ ವಾಗಿ ಕರ್ತನು ಆ ದೇಶವನ್ನೆಲ್ಲಾ ನಮ್ಮ ಕೈಯಲ್ಲಿ ಒಪ್ಪಿಸಿಕೊಟ್ಟನು. ದೇಶದ ನಿವಾಸಿಗಳೆಲ್ಲರು ನಮ್ಮ ನಿಮಿತ್ತ ಕಂಗೆಟ್ಟು ಹೋಗಿದ್ದಾರೆ ಎಂದು ಹೇಳಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ಅವರು ಯೆಹೋಶುವನಿಗೆ - ಯೆಹೋವನು ನಿಜವಾಗಿ ಆ ದೇಶವನ್ನೆಲ್ಲಾ ನಮಗೆ ಕೊಟ್ಟಿದ್ದಾನೆ; ಅದರ ನಿವಾಸಿಗಳೆಲ್ಲಾ ನಮ್ಮ ನಿವಿುತ್ತ ಕಂಗೆಟ್ಟು ಹೋಗಿದ್ದಾರೆ ಎಂದು ತಿಳಿಸಿದರು.
Kannada Bible (KNCL) BSI 2016
ಇದಲ್ಲದೆ, ಅವರು ಯೆಹೋಶುವನಿಗೆ, “ಸರ್ವೇಶ್ವರಸ್ವಾಮಿ ನಿಜವಾಗಿ ಈ ನಾಡನ್ನೆಲ್ಲಾ ನಮಗೆ ಕೊಟ್ಟಿದ್ದಾರೆ. ಅದರ ನಿವಾಸಿಗಳೆಲ್ಲ ನಮ್ಮನ್ನು ಕಂಡು ನಡುಗುತ್ತ ಇದ್ದಾರೆ,” ಎಂದು ತಿಳಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಯೆಹೋಶುವನಿಗೆ, “ನಿಶ್ಚಯವಾಗಿ ಯೆಹೋವ ದೇವರು ದೇಶವನ್ನೆಲ್ಲಾ ನಮ್ಮ ಕೈಯಲ್ಲಿ ಒಪ್ಪಿಸಿಕೊಟ್ಟಿದ್ದಾರೆ. ದೇಶದ ನಿವಾಸಿಗಳೆಲ್ಲರೂ ನಮ್ಮ ನಿಮಿತ್ತ ಕಂಗೆಟ್ಟು ಹೋಗಿದ್ದಾರೆ,” ಎಂದರು.