Joshua 2:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ಜೆರಿಕೊ ನಗರದ ಅರಸನು ರಾಹಾಬಳಿಗೆ, “ನಿನ್ನ ಮನೆಗೆ ಬಂದು ಇಳಿದುಕೊಂಡ ಆ ಜನರನ್ನು ಬಚ್ಚಿಡಬೇಡ. ಅವರನ್ನು ಹೊರಗೆ ಕರೆದುಕೊಂಡು ಬಾ. ಅವರು ನಮ್ಮ ದೇಶದ ಬಗ್ಗೆ ತಿಳಿದುಕೊಳ್ಳುವುದಕ್ಕೆ ಬಂದಿದ್ದಾರೆ” ಎಂದು ಹೇಳಿ ಕಳುಹಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಯೆರಿಕೋವಿನ ಅರಸನು ರಾಹಾಬಳಿಗೆ “ನಿನ್ನ ಮನೆಯಲ್ಲಿ ಇಳಿದುಕೊಂಡಿರುವ ಆ ಮನುಷ್ಯರನ್ನು ತಂದೊಪ್ಪಿಸು; ಅವರು ದೇಶವನ್ನೆಲ್ಲಾ ಸಂಚರಿಸಿ ನೋಡಿ ಹೊಂಚುಹಾಕುವುದಕ್ಕೆ ಬಂದವರು” ಎಂದು ಹೇಳಿ ಕಳುಹಿಸಿದನು.
Kannada BSI Bible 2016
ಆಗ ಯೆರಿಕೋವಿನ ಅರಸನು ರಾಹಾಬಳ ಬಳಿಗೆ ಕಳುಹಿಸಿ--ನಿನ್ನ ಬಳಿಗೆ ಬಂದು ನಿನ್ನ ಮನೆಯಲ್ಲಿ ಪ್ರವೇಶಿಸಿದ ಮನುಷ್ಯರನ್ನು ಹೊರಗೆ ಕರಕೊಂಡು ಬಾ. ಅವರು ದೇಶವನ್ನೆಲ್ಲಾ ಶೋಧಿಸಲು ಬಂದಿದ್ದಾರೆ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆರಿಕೋವಿನ ಅರಸನು ರಾಹಾಬಳಿಗೆ - ನಿನ್ನ ಮನೆಯಲ್ಲಿಳುಕೊಂಡಿರುವ ಮನುಷ್ಯರನ್ನು ತಂದೊಪ್ಪಿಸು; ಅವರು ದೇಶವನ್ನೆಲ್ಲಾ ಸಂಚರಿಸಿ ನೋಡುವದಕ್ಕೆ ಬಂದವರು ಎಂದು ಹೇಳಿ ಕಳುಹಿಸಿದನು.
Kannada Bible (KNCL) BSI 2016
ಅವನು ರಾಹಾಬಳಿಗೆ, “ನಿನ್ನ ಮನೆಯಲ್ಲಿ ಇಳಿದುಕೊಂಡಿರುವ ಆ ವ್ಯಕ್ತಿಗಳನ್ನು ತಂದೊಪ್ಪಿಸು. ಅವರು ನಾಡನ್ನೆಲ್ಲಾ ಸಂಚರಿಸಿ ಬೇಹು ಮಾಡಲು ಬಂದವರು” ಎಂದು ಹೇಳಿ ಕಳಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯೆರಿಕೋವಿನ ಅರಸನು ರಾಹಾಬಳಿಗೆ, “ನಿನ್ನ ಬಳಿಗೆ ಬಂದು ನಿನ್ನ ಮನೆಯಲ್ಲಿ ಪ್ರವೇಶಿಸಿದ ಮನುಷ್ಯರನ್ನು ಹೊರಗೆ ಕರೆದುಕೊಂಡು ಬಾ. ಏಕೆಂದರೆ ಅವರು ದೇಶವನ್ನೆಲ್ಲಾ ಗೂಢಚಾರ ಮಾಡಲು ಬಂದಿದ್ದಾರೆ,” ಎಂದನು.