Joshua 2:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸಾಯಂಕಾಲ ನಗರದ ದ್ವಾರವನ್ನು ಮುಚ್ಚುವ ಸಮಯವಾದಾಗ ಅವರು ಹೊರಟುಹೋದರು. ಅವರು ಎಲ್ಲಿಗೆ ಹೋದರೆಂಬುದು ನನಗೆ ತಿಳಿಯದು. ಆದರೂ ನೀವು ಬೇಗ ಹೋದರೆ ಅವರನ್ನು ಹಿಡಿಯಬಹುದು” ಎಂದಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಊರಬಾಗಿಲನ್ನು ಮುಚ್ಚುವ ಹೊತ್ತಿನಲ್ಲಿ ಕತ್ತಲಲ್ಲೇ ಹೊರಟುಹೋದರು. ಎಲ್ಲಿಗೆ ಹೋದರೆಂಬುದು ಗೊತ್ತಿಲ್ಲ. ಬೇಗನೆ ಅವರನ್ನು ಬೆನ್ನಟ್ಟಿರಿ; ನಿಮಗೆ ಸಿಕ್ಕಾರು” ಎಂದು ಹೇಳಿದಳು.
Kannada BSI Bible 2016
ಬಾಗಲನ್ನು ಮುಚ್ಚುವ ವೇಳೆಯಲ್ಲಿ ಆ ಮನುಷ್ಯರು ಕತ್ತಲೆಯಲ್ಲಿ ಹೊರಟುಹೋದರು. ಅವರು ಎಲ್ಲಿ ಹೋದರೋ ನಾನು ಅರಿಯೆ; ಅವರನ್ನು ಬೇಗ ಹಿಂದಟ್ಟಿರಿ; ನಿಮಗೆ ಸಿಕ್ಕುವರು ಅಂದಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಊರುಬಾಗಲನ್ನು ಮುಚ್ಚುವ ಹೊತ್ತಿನಲ್ಲಿ ಕತ್ತಲೊಳಗೆ ಹೊರಟುಹೋದರು. ಎಲ್ಲಿಗೆ ಹೋದರೆಂಬದೂ ಗೊತ್ತಿಲ್ಲ. ಬೇಗನೆ ಅವರನ್ನು ಬೆನ್ನಟ್ಟಿರಿ; ನಿಮಗೆ ಸಿಕ್ಕಾರು ಎಂದು ಹೇಳಿದಳು.
Kannada Bible (KNCL) BSI 2016
ಊರಬಾಗಿಲನ್ನು ಮುಚ್ಚುವ ಹೊತ್ತಿಗೆ ಕತ್ತಲಲ್ಲಿ ಹೊರಟುಹೋದರು. ಎಲ್ಲಿಗೆ ಹೋದರೆಂಬುದೂ ನನಗೆ ಗೊತ್ತಿಲ್ಲ. ಬೇಗನೆ ಅವರ ಬೆನ್ನಟ್ಟಿರಿ. ಅವರು ನಿಮಗೆ ಸಿಕ್ಕುವರು,” ಎಂದು ಹೇಳಿದಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪಟ್ಟಣದ ಬಾಗಿಲು ಮುಚ್ಚುವ ಮುಸ್ಸಂಜೆ ವೇಳೆಯಲ್ಲಿ ಆ ಮನುಷ್ಯರು ಹೊರಟು ಹೋದರು. ಅವರು ಎಲ್ಲಿ ಹೋದರೋ ನಾನು ಅರಿಯೆ. ಅವರನ್ನು ಬೇಗ ಹಿಂದಟ್ಟಿರಿ. ನಿಮಗೆ ಸಿಕ್ಕುವರು,” ಎಂದಳು.