Joshua 2:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ರಾಜಭಟರು ನಗರದ ಹೊರಗೆ ಹೋಗಿ ನಗರದ ದ್ವಾರಗಳನ್ನು ಮುಚ್ಚಿ ಇಸ್ರೇಲಿನಿಂದ ಬಂದ ಆ ಇಬ್ಬರನ್ನು ಹುಡುಕಿಕೊಂಡು ಹೋದರು. ಅವರು ಜೋರ್ಡನ್ ನದಿಯವರೆಗೆ ಹೋಗಿ ಜನರು ನದಿದಾಟುವ ಎಲ್ಲ ಸ್ಥಳಗಳಲ್ಲಿ ಹುಡುಕಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅರಸನ ಆಳುಗಳು ಯೊರ್ದನಿನ ದಾರಿ ಹಿಡಿದು ಹೋಗಿ ಹೊಳೆದಾಟುವ ಸ್ಥಳದವರೆಗೂ ಹುಡುಕಿದರು. ಅವರನ್ನು ಹಿಂದಟ್ಟುವವರು ಹೋದ ಕೂಡಲೇ ಹೆಬ್ಬಾಗಿಲನ್ನು ಮುಚ್ಚಿದರು.
Kannada BSI Bible 2016
ಆ ಮನುಷ್ಯರು ಯೊರ್ದನಿಗೆ ಹೋಗುವ ಹಾದಿಯಲ್ಲಿ ನದಿಯ ರೇವುಗಳ ವರೆಗೂ ಅವರನ್ನು ಹಿಂದಟ್ಟಿದರು. ಅವರನ್ನು ಹಿಂದಟ್ಟುವವರು ಹೊರಟುಹೋದ ಕೂಡಲೆ ಹೆಬ್ಬಾಗಲನ್ನು ಮುಚ್ಚಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅರಸನ ಆಳುಗಳು ಯೊರ್ದನಿನ ದಾರಿಹಿಡಿದು ಹೋಗಿ ಹೊಳೆದಾಟುವ ಸ್ಥಳಗಳವರೆಗೂ ಹುಡುಕಿದರು. ಹುಡುಕುವವರು ಹೊರಟ ಕೂಡಲೆ ಊರುಬಾಗಲನ್ನು ಮುಚ್ಚಿದರು.
Kannada Bible (KNCL) BSI 2016
ಅರಸನ ಆಳುಗಳು ಜೋರ್ಡನ್ ದಾರಿ ಹಿಡಿದು ಹೋಗಿ ನದಿದಾಟುವ ಸ್ಥಳದವರೆಗೂ ಹುಡುಕಿದರು. ಹುಡುಕುವವರು ಹೊರಟಕೂಡಲೆ ಊರಬಾಗಿಲನ್ನು ಮುಚ್ಚಲಾಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ಮನುಷ್ಯರು ಯೊರ್ದನ್ ನದಿ ದಾರಿ ಹಿಡಿದು ಹೋಗಿ ನದಿ ದಾಟುವ ಸ್ಥಳದವರೆಗೂ ಅವರನ್ನು ಹಿಂದಟ್ಟಿದರು. ಅವರನ್ನು ಹಿಂದಟ್ಟುವವರು ಹೊರಟುಹೋದ ಕೂಡಲೆ, ಪಟ್ಟಣದ ಹೆಬ್ಬಾಗಿಲು ಮುಚ್ಚಿದರು.