Joshua 2:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಯೆಹೋವನು ಈ ದೇಶವನ್ನು ನಿಮ್ಮ ಜನರಿಗೆ ಕೊಟ್ಟಿದ್ದಾನೆಂದು ನಾನು ಬಲ್ಲೆ. ನಿಮ್ಮ ವಿಷಯ ಕೇಳಿ ನಮಗೆ ಭಯ ಉಂಟಾಗಿದೆ. ಈ ದೇಶದಲ್ಲಿರುವ ಎಲ್ಲಾ ಜನರು ನಿಮ್ಮಿಂದ ಭಯಭೀತರಾಗಿದ್ದಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಯೆಹೋವನು ಈ ದೇಶವನ್ನು ನಿಮಗೆ ಕೊಟ್ಟಿದ್ದಾನೆಂದು ನಾನು ಬಲ್ಲೆನು. ನಿಮ್ಮ ವಿಷಯದಲ್ಲಿ ನಮಗೆ ಮಹಾಭಯವುಂಟಾಗಿದೆ; ದೇಶದ ನಿವಾಸಿಗಳೆಲ್ಲರೂ ಕಂಗೆಟ್ಟುಹೋಗಿದ್ದಾರೆ.
Kannada BSI Bible 2016
ಕರ್ತನು ನಿಮಗೆ ದೇಶವನ್ನು ಕೊಟ್ಟಿದ್ದಾನೆಂದೂ ನಿಮ್ಮ ನಿಮಿತ್ತ ನಮಗೆ ಮಹಾಭೀತಿ ಯಾಗಿದೆ ಎಂದೂ ನಿಮಗೋಸ್ಕರ ದೇಶದ ನಿವಾಸಿ ಗಳೆಲ್ಲರು ಕಂಗೆಟ್ಟು ಹೋಗಿದ್ದಾರೆಂದೂ ನಾನು ಬಲ್ಲೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಕೆಯು ಮಾಳಿಗೆಹತ್ತಿ ಅವರ ಬಳಿಗೆ ಬಂದು ಹೇಳಿದ್ದೇನಂದರೆ - ಯೆಹೋವನು ಈ ದೇಶವನ್ನು ನಿಮಗೆ ಕೊಟ್ಟಿರುವದನ್ನು ಬಲ್ಲೆನು. ನಿಮ್ಮ ನಿವಿುತ್ತ ನಮಗೆ ಮಹಾಭೀತಿಯುಂಟಾಗಿದೆ; ದೇಶದ ನಿವಾಸಿಗಳೆಲ್ಲರೂ ಕಂಗೆಟ್ಟುಹೋಗಿದ್ದಾರೆ.
Kannada Bible (KNCL) BSI 2016
“ಸರ್ವೇಶ್ವರ ಈ ನಾಡನ್ನು ನಿಮಗೆ ಕೊಟ್ಟಿದ್ದಾರೆಂದು ನಾನು ಬಲ್ಲೆ; ನಿಮ್ಮ ವಿಷಯದಲ್ಲಿ ನಮಗೆ ಮಹಾಭೀತಿ ಉಂಟಾಗಿದೆ. ನಾಡಿನ ನಿವಾಸಿಗಳೆಲ್ಲರೂ ಕಂಗೆಟ್ಟು ಹೋಗಿದ್ದಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಯೆಹೋವ ದೇವರು ನಿಮಗೆ ದೇಶವನ್ನು ಕೊಟ್ಟಿದ್ದಾರೆಂದೂ, ನಿಮ್ಮ ನಿಮಿತ್ತ ನಮಗೆ ಮಹಾ ಭೀತಿಯಾಗಿದೆ ಎಂದೂ ನಿಮಗೋಸ್ಕರ ದೇಶದ ನಿವಾಸಿಗಳೆಲ್ಲರೂ ಕಂಗೆಟ್ಟು ಹೋಗಿದ್ದಾರೆಂದೂ ನಾನು ಬಲ್ಲೆನು.