Joshua 20:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ನಗರದ ನ್ಯಾಯಾಸ್ಥಾನದಲ್ಲಿ ನ್ಯಾಯನಿರ್ಣಯವಾಗುವವರೆಗೂ ಮತ್ತು ಮಹಾಯಾಜಕನು ಜೀವದಿಂದ ಇರುವವರೆಗೂ ಅವನು ಅಲ್ಲಿಯೇ ಇರಬೇಕು. ತರುವಾಯ ಅವನು ತಾನು ಬಿಟ್ಟುಬಂದ ಊರಿನ ತನ್ನ ಮನೆಗೆ ಹೋಗಬಹುದು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಒಂದು ಸಭೆಯನ್ನು ಸೇರಿಸಿ ಅಂಥವನನ್ನು ವಿಚಾರಿಸಬೇಕು; ಮತ್ತು ಅವನು ಆಗಿನ ಮಹಾಯಾಜಕನ ಜೀವಮಾನವೆಲ್ಲಾ ಅದೇ ಪಟ್ಟಣದಲ್ಲಿ ಇರಬೇಕು. ಆ ನಂತರ ತಾನು ಬಿಟ್ಟು ಬಂದ ಪಟ್ಟಣದಲ್ಲಿರುವ ಮನೆಗೆ ಹಿಂತಿರುಗಿ ಹೋಗಬಹುದು’ ಎಂದು ಹೇಳು” ಎಂದನು.
Kannada BSI Bible 2016
ಇದಲ್ಲದೆ ಅವನು ನ್ಯಾಯವಿಚಾರಣೆಗೋಸ್ಕರ ಸಭೆಯ ಮುಂದೆ ಬಂದು ನಿಲ್ಲುವವರೆಗೂ ಆಗಿನ ಪ್ರಧಾನ ಯಾಜಕನು ಮರಣ ಹೊಂದುವ ವರೆಗೂ ಆ ಪಟ್ಟಣದಲ್ಲೇ ವಾಸವಾಗಿರ ಬೇಕು. ತರುವಾಯ ಕೊಂದವನು ತಾನು ಬಿಟ್ಟು ಓಡಿಹೋದ ತನ್ನ ಪಟ್ಟಣಕ್ಕೂ ಮನೆಗೂ ತಿರುಗಿ ಬರಬಹುದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಒಂದು ಸಭೆಯನ್ನು ಸೇರಿಸಿ ಅಂಥವನನ್ನು ವಿಚಾರಿಸಬೇಕು; ಮತ್ತು ಅವನು ಆಗಿನ ಮಹಾಯಾಜಕನ ಜೀವಮಾನವೆಲ್ಲಾ ಅದೇ ಪಟ್ಟಣದಲ್ಲಿರಬೇಕು. ಆಮೇಲೆ ತಾನು ಬಿಟ್ಟುಬಂದ ಪಟ್ಟಣದಲ್ಲಿರುವ ಮನೆಗೆ ಹಿಂದಿರುಗಿ ಹೋಗಬಹುದು ಎಂದು ಹೇಳು ಅಂದನು.
Kannada Bible (KNCL) BSI 2016
ಅಂಥವನನ್ನು ಒಂದು ಸಭೆಸೇರಿಸಿ ವಿಚಾರಿಸಬೇಕು. ಅವನು ಆಗಿನ ಪ್ರಧಾನ ಯಾಜಕನ ಜೀವಮಾನವೆಲ್ಲಾ ಅದೇ ನಗರದಲ್ಲಿರಬೇಕು. ಆಮೇಲೆ ತಾನು ಬಿಟ್ಟುಬಂದ ಊರಿಗೆ, ಮನೆಗೆ ಹಿಂದಿರುಗಬಹುದು’ ಎಂದು ತಿಳಿಸು,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ಅವನು ನ್ಯಾಯ ವಿಚಾರಣೆಗೋಸ್ಕರ ಸಭೆಯ ಮುಂದೆ ಬಂದು ನಿಲ್ಲುವವರೆಗೂ ಆ ದಿವಸಗಳಲ್ಲಿ ಇರುವ ಮಹಾಯಾಜಕನು ಮರಣ ಹೊಂದುವವರೆಗೂ ಆ ಪಟ್ಟಣದಲ್ಲೇ ವಾಸವಾಗಿರಬೇಕು. ತರುವಾಯ ಕೊಂದವನು ತಾನು ಬಿಟ್ಟು ಓಡಿ ಹೋದ ತನ್ನ ಪಟ್ಟಣಕ್ಕೂ, ತನ್ನ ಮನೆಗೂ ತಿರುಗಿಬರಬಹುದು,” ಎಂದು ಹೇಳಿದರು.