Joshua 20:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಜೆರಿಕೊವಿನ ಹತ್ತಿರ ಜೋರ್ಡನ್ ನದಿಯ ಪೂರ್ವದಲ್ಲಿದ್ದ ರೂಬೇನ್ಯರ ಪ್ರಾಂತ್ಯದ ಅರಣ್ಯಪ್ರದೇಶದಲ್ಲಿನ ಬೆಚೆರ್, ಗಾದ್ಯರಿಗೆ ಸೇರಿದ ಗಿಲ್ಯಾದ್ ಪ್ರಾಂತ್ಯದಲ್ಲಿನ ರಾಮೋತ್; ಮನಸ್ಸೆಯವರಿಗೆ ಸೇರಿದ ಬಾಷಾನಿನಲ್ಲಿರುವ ಗೋಲಾನ್.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇವುಗಳನ್ನು ಮಾತ್ರವಲ್ಲದೆ, ಯೆರಿಕೋವಿನ ಪೂರ್ವದಲ್ಲಿರುವ ಯೊರ್ದನಿನ ಆಚೆಯಲ್ಲಿ ರೂಬೇನ್ಯರ ಬೆಟ್ಟದ ಮೇಲಿನ ಅರಣ್ಯ ಪ್ರದೇಶದಲ್ಲಿರುವ ಬೆಚೆರ್, ಗಾದ್ಯರಿಗೆ ಸೇರಿದ ಗಿಲ್ಯಾದ್ ಪ್ರಾಂತ್ಯದ ರಾಮೋತ್, ಮನಸ್ಸೆಯವರಿಗೆ ಸೇರಿದ ಬಾಷಾನಿನಲ್ಲಿರುವ ಗೋಲಾನ್ ಎಂಬ ಪಟ್ಟಣಗಳನ್ನು ನೇಮಿಸಿದನು.
Kannada BSI Bible 2016
ಯೆರಿಕೋವಿನ ಪೂರ್ವದ ಲ್ಲಿರುವ ಯೊರ್ದನಿನ ಆಚೆ ರೂಬೇನನ ಗೋತ್ರಕ್ಕಿರುವ ಸಮವಾದ ಭೂಮಿಯ ಅರಣ್ಯದಲ್ಲಿರುವ ಬೆಚೆರನ್ನೂ ಗಾದನ ಗೋತ್ರಕ್ಕೆ ಗಿಲ್ಯಾದಿನಲ್ಲಿರುವ ರಾಮೋತನ್ನೂ ಮನಸ್ಸೆಯ ಗೋತ್ರಕ್ಕೆ ಬಾಷಾನಿನಲ್ಲಿರುವ ಗೋಲಾ ನನ್ನೂ ಕೊಟ್ಟರು.ಕೈ ತಪ್ಪಿ ಅರಿಯದೆ ಕೊಂದರೆ ಯಾವನಾದರೂ ಸಭೆಯ ಮುಂದೆ ಬಂದು ನಿಲ್ಲುವ ಪರ್ಯಂತರ ರಕ್ತದ ಸೇಡು ತೀರಿಸಿ ಕೊಳ್ಳುವವನ ಕೈಯಿಂದ ಸಾಯದ ಹಾಗೆ ಅಲ್ಲಿ ಓಡಿ ಹೋಗುವದಕ್ಕೆ ಇಸ್ರಾಯೇಲ್ ಮಕ್ಕಳೆಲ್ಲರಿಗೂ ಅವರ ಮಧ್ಯದಲ್ಲಿ ವಾಸವಾಗಿರುವ ಪರಕೀಯರಿಗೂ ನೇಮಿಸಲ್ಪಟ್ಟ ಪಟ್ಟಣಗಳು ಇವೇ.
Kannada BSI JV (ಕನ್ನಡ ಸತ್ಯವೇದವು J.V. (BSI))
ಮತ್ತು ಯೆರಿಕೋವಿನ ಪೂರ್ವದಲ್ಲಿರುವ ಯೊರ್ದನಿನ ಆಚೆಯಲ್ಲಿ ರೂಬೇನ್ಯರ ಬೆಟ್ಟದ ಮೇಲಿನ ಅರಣ್ಯ ಪ್ರದೇಶದಲ್ಲಿರುವ ಬೆಚೆರ್, ಗಾದ್ಯರಿಗೆ ಸೇರಿದ ಗಿಲ್ಯಾದ್ ಪ್ರಾಂತದ ರಾಮೋತ್, ಮನಸ್ಸೆಯವರಿಗೆ ಸೇರಿದ ಬಾಷಾನಿನಲ್ಲಿರುವ ಗೋಲಾನ್ ಎಂಬ ಪಟ್ಟಣಗಳನ್ನೂ ನೇವಿುಸಿದರು.
Kannada Bible (KNCL) BSI 2016
ಇವುಗಳನ್ನು ಮಾತ್ರವಲ್ಲ ಜೆರಿಕೋವಿನ ಪೂರ್ವದಲ್ಲಿರುವ ಜೋರ್ಡನಿನ ಆಚೆಯಲ್ಲಿ ರೂಬೇನ್ಯರ ಬೆಟ್ಟದ ಮೇಲಿನ ಮರುಭೂಮಿಯಲ್ಲಿರುವ ಬೆಚೆರ್, ಗಾದ್ಯರಿಗೆ ಸೇರಿದ ಗಿಲ್ಯಾದ್ ಪ್ರಾಂತ್ಯದ ರಾಮೋತ್, ಮನಸ್ಸೆಯವರಿಗೆ ಸೇರಿದ ಬಾಷಾನಿನಲ್ಲಿರುವ ಗೋಲಾನ್ ಎಂಬ ನಗರಗಳನ್ನು ನೇಮಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆರಿಕೋವಿನ ಪೂರ್ವದಲ್ಲಿರುವ ಯೊರ್ದನ್ ನದಿ ಆಚೆ ರೂಬೇನನ ಗೋತ್ರಕ್ಕಿರುವ ಸಮ ಭೂಮಿಯ ಅರಣ್ಯದಲ್ಲಿರುವ ಬೆಚೆರನ್ನು ಗಾದನ ಗೋತ್ರಕ್ಕೆ ಗಿಲ್ಯಾದಿನ ರಾಮೋತನ್ನೂ, ಮನಸ್ಸೆಯ ಗೋತ್ರಕ್ಕೆ ಬಾಷಾನಿನಲ್ಲಿರುವ ಗೋಲಾನನ್ನೂ ಕೊಟ್ಟರು.