Joshua 21:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವರಿಗೆ ಹೆಬ್ರೋನ್ ಎಂಬ ಕಿರ್ಯತರ್ಬನಗರ (ಇದಕ್ಕೆ ಅನಾಕನ ತಂದೆಯಾದ ಅರ್ಬನ ಹೆಸರಿಡಲಾಗಿತ್ತು.) ಮತ್ತು ಅವರ ಪಶುಗಳಿಗಾಗಿ ಆ ನಗರದ ಹತ್ತಿರದ ಸ್ವಲ್ಪ ಭೂಮಿಯನ್ನು ಕೊಡಲಾಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇವುಗಳಲ್ಲಿ ಯೆಹೂದ ಬೆಟ್ಟದ ಸೀಮೆಯ ಹೆಬ್ರೋನೆಂಬ ಗೋಮಾಳ ಸಹಿತವಾದ ಕಿರ್ಯತರ್ಬವೂ ಸೇರಿರುತ್ತದೆ. (ಕಿರ್ಯಾತ ಅರ್ಬ ಎಂದರೆ ಅನಾಕನ ತಂದೆಯಾದ ಅರ್ಬನ ಪಟ್ಟಣ) ಅದರ ಸುತ್ತಲಿರುವ ಉಪನಗರಗಳನ್ನೂ ಅವರಿಗೆ ಕೊಟ್ಟರು.
Kannada BSI Bible 2016
ಯೂದನ ಬೆಟ್ಟಗಳಲ್ಲಿರುವ ಅನಾಕನ ತಂದೆಯಾದ ಅರ್ಬನ ಹೆಸರಿನ ಪಟ್ಟಣ ಹೆಬ್ರೋ ನನ್ನೂ ಅದರ ಸುತ್ತಲಿರುವ ಉಪನಗರಗಳನ್ನೂ ಅವ ರಿಗೆ ಕೊಟ್ಟರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇವುಗಳಲ್ಲಿ ಯೆಹೂದ ಬೆಟ್ಟದ ಸೀಮೆಯ ಹೆಬ್ರೋನೆಂಬ ಗೋಮಾಳ ಸಹಿತವಾದ ಕಿರ್ಯತರ್ಬವೂ ಸೇರಿರುತ್ತದೆ. (ಕಿರ್ಯತರ್ಬವಂದರೆ ಅನಾಕನ ತಂದೆಯಾದ ಅರ್ಬನ ಪಟ್ಟಣ.)
Kannada Bible (KNCL) BSI 2016
ಇವುಗಳಲ್ಲಿ ಯೆಹೂದ ಮಲೆನಾಡಿನ ಹೆಬ್ರೋನೆಂಬ ಗೋಮಾಳ ಸಹಿತವಾದ ಕಿರ್ಯತರ್ಬವೂ ಸೇರಿರುತ್ತದೆ. (ಕಿರ್ಯತರ್ಬ ಎಂದರೆ ಅನಾಕನ ತಂದೆಯಾದ ಅರ್ಬನನಗರ).
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೂದದ ಬೆಟ್ಟಗಳಲ್ಲಿರುವ ಅನಾಕನ ಪಿತೃವಾದ ಕಿರ್ಯತ್ ಅರ್ಬನ ಹೆಸರಿದ್ದ ಪಟ್ಟಣವಾದ ಹೆಬ್ರೋನನ್ನೂ, ಅದರ ಸುತ್ತಲಿರುವ ಗೋಮಾಳಗಳನ್ನೂ ಅವರಿಗೆ ಕೊಟ್ಟರು.