Joshua 21:16 — Compare Translations
4 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಯಿನ್, ಯುಟ್ಟಾ ಮತ್ತು ಬೇತ್‌ಷೆಮೆಷ್ ಎಂಬ ಪಟ್ಟಣಗಳನ್ನು ಸಹ ಕೊಟ್ಟರು. ಅವರ ಪಶುಗಳಿಗಾಗಿ ಪಟ್ಟಣಗಳ ಸಮೀಪದಲ್ಲಿದ್ದ ಭೂಮಿಯನ್ನು ಸಹ ಕೊಟ್ಟರು. ಈ ಎರಡು ಗುಂಪುಗಳಿಗೆ ಅವರು ಒಂಭತ್ತು ಪಟ್ಟಣಗಳನ್ನು ಕೊಟ್ಟರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಯಿನ್, ಯುಟ್ಟಾ, ಬೇತ್‌ಷೆಮೆಷ್ ಎಂಬ ಒಂಭತ್ತು ಗೋಮಾಳ ಸಹಿತವಾದ ಪಟ್ಟಣಗಳು
Kannada BSI Bible 2016
ಆಯಿನನ್ನೂ ಅದರ ಉಪನಗರಗಳನ್ನೂ ಯುಟ್ಟಾ ವನ್ನೂ ಅದರ ಉಪನಗರಗಳನ್ನೂ ಬೇತ್‌ಷೆಮೆಷನ್ನೂ ಅದರ ಉಪನಗರಗಳನ್ನೂ; ಹೀಗೆಯೇ ಆ ಎರಡು ಗೋತ್ರಗಳಿಂದ ಈ ಒಂಭತ್ತು ಪಟ್ಟಣಗಳನ್ನು ಕೊಟ್ಟರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಯಿನ್, ಯುಟ್ಟಾ, ಬೇತ್ ಷೆಮೆಷ್ ಎಂಬ ಆ ಎರಡು ಗೋತ್ರಗಳಿಂದ ಈ ಒಂಬತ್ತು ಪಟ್ಟಣಗಳನ್ನು ಅವುಗಳ ಗೋಮಾಳ ಸಹಿತವಾಗಿ ಕೊಟ್ಟರು.