Joshua 21:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇದು ಕಾನಾನ್ ದೇಶದ ಶೀಲೋವಿನಲ್ಲಿ ನಡೆಯಿತು. ಲೇವಿ ಕುಲಾಧಿಪತಿಗಳು ಅವರಿಗೆ, “ಯೆಹೋವನು ಮೋಶೆಗೆ ಆಜ್ಞಾಪಿಸಿರುವಂತೆ ನೀವು ನಮಗೆ ವಾಸಮಾಡುವುದಕ್ಕೆ ಪಟ್ಟಣಗಳನ್ನೂ ನಮ್ಮ ಪಶುಗಳು ಮೇಯುವುದಕ್ಕಾಗಿ ಹೊಲಗಳನ್ನೂ ಕೊಡಬೇಕು” ಎಂದು ಹೇಳಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನಮ್ಮ ನಿವಾಸಕ್ಕೆ ಪಟ್ಟಣಗಳನ್ನೂ ಪಶುಗಳಿಗೆ ಗೋಮಾಳಗಳನ್ನೂ ಕೊಡಬೇಕೆಂದು ಯೆಹೋವನು ಮೋಶೆಯ ಮೂಲಕ ಆಜ್ಞಾಪಿಸಿದ್ದಾನಲ್ಲವೆ?” ಅನ್ನಲು
Kannada BSI Bible 2016
ನಾವು ವಾಸವಾಗಿರುವ ಪಟ್ಟಣಗಳನ್ನು ನಮ್ಮ ಪಶುಗಳಿಗೋಸ್ಕರ ಅವುಗಳ ಉಪನಗರಗಳೊಂದಿಗೆ ನಮಗೆ ಕೊಡಬೇಕೆಂದು ಕರ್ತನು ಮೋಶೆಯ ಮುಖಾಂತರವಾಗಿ ಆಜ್ಞಾಪಿಸಿ ದ್ದಾನೆ ಅಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇವರ ಬಳಿಗೆ ಬಂದು - ನಮ್ಮ ನಿವಾಸಕ್ಕೆ ಪಟ್ಟಣಗಳನ್ನೂ ಪಶುಗಳಿಗೆ ಗೋಮಾಳಗಳನ್ನೂ ಕೊಡಬೇಕೆಂದು ಯೆಹೋವನು ಮೋಶೆಯ ಮೂಲಕ ಆಜ್ಞಾಪಿಸಿದ್ದಾನಲ್ಲಾ ಅನ್ನಲು
Kannada Bible (KNCL) BSI 2016
“ನಮ್ಮ ನಿವಾಸಕ್ಕೆ ನಗರಗಳನ್ನೂ ನಮ್ಮ ಪಶುಪ್ರಾಣಿಗಳಿಗೆ ಗೋಮಾಳಗಳನ್ನೂ ಕೊಡಬೇಕೆಂದು ಸರ್ವೇಶ್ವರಸ್ವಾಮಿ ಮೋಶೆಯ ಮುಖಾಂತರ ಆಜ್ಞಾಪಿಸಿದ್ದಾರಲ್ಲವೆ?” ಎಂದು ವಿನಂತಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಕಾನಾನ್ ದೇಶದ ಶೀಲೋವಿನಲ್ಲಿ ಅವರನ್ನು ಸಂಧಿಸಿ, “ನಾವು ವಾಸವಾಗಿರುವ ಪಟ್ಟಣಗಳನ್ನು ನಮ್ಮ ಪಶುಗಳಿಗೋಸ್ಕರ ಅವುಗಳ ಉಪನಗರಗಳೊಂದಿಗೆ ನಮಗೆ ಕೊಡಬೇಕೆಂದು ಯೆಹೋವ ದೇವರು ಮೋಶೆಯ ಮುಖಾಂತರವಾಗಿ ಆಜ್ಞಾಪಿಸಿದ್ದಾರೆ,” ಎಂದರು.